Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಲಾಂಚ್ ಆಯ್ತು 108MP ಕ್ಯಾಮೆರಾದ ಮಿ 10i ಸ್ಮಾರ್ಟ್‌ಫೋನ್!

ಶಿಯೋಮಿ ಕಂಪನಿಯು ಭಾರತೀಯ ಮಾರುಕಟ್ಟೆಗೆ ನೂತನವಾಗಿ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ವಿಶೇಷ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಹಿಂಬದಿಯ ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಡಿವೈಸ್‌ನಿಂದಲೂ ಆಕರ್ಷಕ ಲುಕ್‌ನಲ್ಲಿದೆ.

ಹೊಸದಾಗಿ

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಇಂದು (ಜ.5) ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಫೋನಿನ ಡಿಸ್‌ಪ್ಲೇ 125Hz ರಿಫ್ರೆಶ್‌ ರೇಟ್‌ ಜೊತೆಗೆ 450 ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 84.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಪಡೆದಿದೆ. ಇ-ಪೇಪರ್ ಓದುವುದಕ್ಕೆ ಪೂರಕವಾಗಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿದೆ.ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM+128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಸ್ಪೆಷಲ್ ಕ್ಯಾಮೆರಾ

ಸ್ಪೆಷಲ್ ಕ್ಯಾಮೆರಾ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಸೌಂಡ್‌ ಫೀಚರ್ಸ್‌

ಬ್ಯಾಟರಿ ಮತ್ತು ಸೌಂಡ್‌ ಫೀಚರ್ಸ್‌

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 5820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜಸ್ಟ್‌ 58 ನಿಮಿಷದಲ್ಲಿ 100% ವರೆಗೂ ಬ್ಯಾಟರಿ ಚಾರ್ಜ್‌ ಆಗುವ ಸಾಮರ್ಥ್ಯ ಪಡೆದಿದೆ ಎಂದು ಕಂಪನಿ ಹೇಳಿಕೊಂಡಿದೆ. ಡ್ಯುಯಲ್‌ ಸ್ಪೀಕರ್ಸ್‌ ಸೌಲಭ್ಯದ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, GPS, USB ಟೈಪ್‌ ಸಿ2 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 6GB RAM+64GB 20,999ರೂ.ಗಳು ಆಗಿದೆ. 6GB RAM+128GB ಬೆಲೆಯು 21,999ರೂ. ಮತ್ತು 8GB RAM+128GB ವೇರಿಯಂಟ್‌ ದರದವು 23,999ರೂ.ಗಳು ಆಗಿದೆ. ಈ ಫೋನ್ ಅಮೆಜಾನ್ ಇ-ಕಾಮರ್ಸ್ ಹಾಗೂ ಅಧಿಕೃತ ಕಂಪನಿಯ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Mi 10i With 108MP Camera Launched In India: Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+