Home
ಸುದ್ದಿಜಾಲ

ಶಿಯೋಮಿಯ ಈ ಸ್ಮಾರ್ಟ್‌ಫೋನ್‌ಗೆ ಭಾರೀ ಡಿಸ್ಕೌಂಟ್‌!..ಖರೀದಿಸಬಹುದೇ?

ಶಿಯೋಮಿ ಸಂಸ್ಥೆಯು ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಕೆಲವು ಹೈ ಎಂಡ್‌ ಮಾದರಿಯ ಫೋನ್‌ಗಳು ಇವೆ. ಅಂತಹ ಹೈ ಎಂಡ್‌ ಮಾದರಿಯ ಫೀಚರ್ಸ್‌ ಹೊಂದಿರುವ ಫೋನ್‌ಗಳ ಪೈಕಿ ಶಿಯೋಮಿ ಮಿ 10T 5G (Mi 10T) ಕೂಡಾ ಒಂದಾಗಿದ್ದು, ಈ ಫೋನ್‌ ಇದೀಗ ಗಮನಾರ್ಹ ಬೆಲೆ ಇಳಿಕೆ ಕಂಡಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ನಲ್ಲಿ 'ಮಿ 10T (Mi 10T)' ಮೊಬೈಲ್‌ ಶೇ. 38% ರಷ್ಟು ರಿಯಾಯಿತಿ ಕಂಡಿದ್ದು, ಹೀಗಾಗಿ 39,999ರೂ. ಬೆಲೆಯ (6GB RAM + 128GB) ವೇರಿಯಂಟ್‌ ಮೊಬೈಲ್‌ 24,999 ರೂ. ಗಳ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್‌ ರಿಯಾಯಿತಿ ಸಹ ಖಚಿತವಾಗಿ ಲಭ್ಯ.

ಶಿಯೋಮಿಯ ಈ ಸ್ಮಾರ್ಟ್‌ಫೋನ್‌ಗೆ ಭಾರೀ ಡಿಸ್ಕೌಂಟ್‌!..ಖರೀದಿಸಬಹುದೇ?

ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಅಲ್ಲದೇ ಇದು ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಲೂನರ್‌ ಸಿಲ್ವರ್‌ ಕಲರ್ ಆಯ್ಕೆ ಪಡೆದಿದ್ದು, ಬಿಗ್ ಬ್ಯಾಟರಿ ಸೌಲಭ್ಯ ಸಹ ಪಡೆದಿದೆ. ಹಾಗಾದರೆ ಮಿ 10T (Mi 10T) ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಶಿಯೋಮಿ ಮಿ 10T ಮೊಬೈಲ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದರ ಜೊತೆಗೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಶಿಯೋಮಿಯ ಈ ಸ್ಮಾರ್ಟ್‌ಫೋನ್‌ಗೆ ಭಾರೀ ಡಿಸ್ಕೌಂಟ್‌!..ಖರೀದಿಸಬಹುದೇ?

ಪ್ರೊಸೆಸರ್‌ ಪವರ್ ಯಾವುದು

ಶಿಯೋಮಿ ಮಿ 10T ಮೊಬೈಲ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಜೊತೆಗೆ ಅಡ್ರಿನೊ 650 GPU ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 6 GB RAM + 128GB ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್

ಶಿಯೋಮಿಯ ಈ ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಶಿಯೋಮಿಯ ಈ ಸ್ಮಾರ್ಟ್‌ಫೋನ್‌ಗೆ ಭಾರೀ ಡಿಸ್ಕೌಂಟ್‌!..ಖರೀದಿಸಬಹುದೇ?

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಶಿಯೋಮಿ ಸಂಸ್ಥೆಯ ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯದವನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ವೈ-ಫೈ, ಬ್ಲೂಟೂತ್ 5.1, ಎನ್‌ಎಫ್‌ಸಿ, ಮೊಬೈಲ್ ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್-ಸಿ ಮತ್ತು ಒಟಿಜಿ ಜೊತೆಗೆ 5G, 4G VoLTE ನೆಟ್‌ವರ್ಕ್‌ಗಳನ್ನು ಸಪೋರ್ಟ್ ಮಾಡುತ್ತದೆ.

ಕಲರ್ ಆಯ್ಕೆ ಮತ್ತು ಮೆಮೊರಿ

ಶಿಯೋಮಿಯ ಈ ಮೊಬೈಲ್‌ 6GB RAM ವೇರಿಯಂಟ್‌ ಹಾಗೂ 8GB RAM ವೇರಿಯಂಟ್‌ ಆಯ್ಕೆ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್‌ ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಲೂನರ್‌ ಸಿಲ್ವರ್‌ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
MI 10T 5G Price drop on amazon website. offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+