ದೇಶಿಯ ಮಾರುಕಟ್ಟೆಗೆ ಶಿಯೋಮಿ ಮಿ 10T ಸ್ಮಾರ್ಟ್‌ಫೋನ್ ಎಂಟ್ರಿ!
ಶಿಯೋಮಿ ಕಂಪನಿಯು ತನ್ನ ಬಹುನಿರೀಕ್ಷಿತ ಮಿ 10T ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯು ಮಿ 10T ಹಾಗೂ ಮಿ 10T ಪ್ರೊ ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಒಳಗೊಂಡಿದೆ. ಮಿ 10T ಸ್ಮಾರ್ಟ್‌ಫೋನ್ ವೇಗದ ಪ್ರೊಸೆಸರ್, ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹಾಗೂ ಬಿಗ್ ಬ್ಯಾಟರಿ ಫೀಚರ್ಸ್‌ಗಳಿಂದ ಹೆಚ್ಚಿನ ಗಮನ ಸೆಳೆದಿದೆ.

ಶಿಯೋಮಿ ಸಂಸ್ಥೆಯು ಮಿ 10T ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಆಂಡ್ರಾಯ್ಡ್ 10 ಓಎಸ್‌ನ ಸಪೋರ್ಟ್ ಪಡೆದಿರುವ ದೈತ್ಯ ಮಿ 10T ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಕಾಸ್ಮಿಕ್ ಬ್ಲ್ಯಾಕ್ ಹಾಗೂ ಲೂನಾರ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಹೊಂದಿದೆ. ಆರಂಭಿಕ ವೇರಿಯಂಟ್ ಬೆಲೆಯು 35,999 ರೂ. ಆಗಿದೆ. ಮಿ 10T ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಶಿಯೋಮಿ ಮಿ 10T ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು 144Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಜೊತೆಗೆ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ
ಶಿಯೋಮಿ ಮಿ 10T ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB + 128GB ಮತ್ತು 8GB + 128GB ವೇರಿಯಂಟ್ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಟ್ರಿಪಲ್ ಕ್ಯಾಮೆರಾ ವಿನ್ಯಾಸ
ಶಿಯೋಮಿ ಮಿ 10T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮೂರನೇ 5ಎಂಪಿ ಮತ್ತು ನಾಲ್ಕನೇ ಕ್ಯಾಮೆರಾ ಮೈಕ್ರೋ ಲೆನ್ಸ್ ಸೆನ್ಸಾರ್ ಹೊಂದಿದೆ. ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ. ಆಕರ್ಷಕ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ ಮಿ ಮಿ 10T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ 5, ಬ್ಲೂಟೂತ್ ವಿ 5.1, NFC, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಅಲ್ಟ್ರಾಸಾನಿಕ್ ದೂರ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ ಮಿ ಮಿ 10T ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 6GB + 128GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 35,999ರೂ. ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 37,999 ರೂ. ಆಗಿದೆ. ಅದೇ ಅಕ್ಟೋಬರ್ 16ರಿಂದ ಸೇಲ್ ಶುರು ಮಾಡಲಿದೆ.


Click it and Unblock the Notifications




