ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಶಿಯೋಮಿಯ ಈ ಫೋನ್‌!..ಖರೀದಿಸಬಹುದೇ?

|

ಅತ್ಯುತ್ತಮ ಆಫರ್‌ನಲ್ಲಿ ಶಿಯೋಮಿ ಕಂಪೆನಿಯ ಫ್ಲ್ಯಾಗ್‌ಶಿಪ್‌ ಮಾದರಿಯ ಫೋನ್‌ ಅನ್ನು ಖರೀದಿಸುವ ಯೋಚನೆ ಮಾಡಿದ್ರೆ, ಇದಕ್ಕೆ ಈಗ ಸಕಾಲ ಎನ್ನಬಹುದು. ಏಕೆಂದರೇ ದೈತ್ಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಶಿಯೋಮಿ ಸಂಸ್ಥೆಯ ಮಿ 10T (Mi 10T) ಸ್ಮಾರ್ಟ್‌ಫೋನ್‌ಗೆ ಭರ್ಜರಿ ಡಿಸ್ಕೌಂಟ್‌ ತಿಳಿಸಿದ್ದು, ಗ್ರಾಹಕರು ಕಣ್ಣಗಲಿಸಿ ಈ ಫೋನಿನತ್ತ ನೋಡುವಂತಾಗಿದೆ.

ಶಿಯೋಮಿ ಮಿ 10T

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನಿಗೆ ಶೇ. 22% ರಷ್ಟು ರಿಯಾಯಿತಿ ತಿಳಿಸಿದ್ದು, ಹೀಗಾಗಿ 35,999ರೂ. ಬೆಲೆಯ ಮಿ 10T ಫೋನ್‌ 27,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಹಿಂದೆ ಈ ಫೋನ್ ಬೆಲೆ ಇಳಿಕೆ ಕಂಡು ಗಮನ ಸೆಳೆದಿತ್ತು. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್‌ ರಿಯಾಯಿತಿ ಸಹ ಲಭ್ಯವಾಗಲಿದೆ.

ಟ್ರಿಪಲ್ ಕ್ಯಾಮೆರಾ

ಇನ್ನು ಈ ಫೋನ್ 6GB RAM ವೇರಿಯಂಟ್‌ ಹಾಗೂ 8GB RAM ವೇರಿಯಂಟ್‌ ಆಯ್ಕೆ ಪಡೆದಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಲೂನರ್‌ ಸಿಲ್ವರ್‌ ಕಲರ್ ಆಯ್ಕೆಗಳಲ್ಲಿ ಲಭ್ಯ. ಹಾಗಾದರೆ ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಜೊತೆಗೆ ಅಡ್ರಿನೊ 650 GPU ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 6 GB RAM + 128GB ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್

ತ್ರಿವಳಿ ಕ್ಯಾಮೆರಾ ಸೆನ್ಸಾರ್

ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಶಿಯೋಮಿ ಮಿ 10T (Mi 10T) ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ, ಬ್ಲೂಟೂತ್ 5.1, ಎನ್‌ಎಫ್‌ಸಿ, ಮೊಬೈಲ್ ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್-ಸಿ ಮತ್ತು ಒಟಿಜಿ ಜೊತೆಗೆ 5G, 4G VoLTE ನೆಟ್‌ವರ್ಕ್‌ಗಳನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ 10T ಪ್ರೊ ಸ್ಮಾರ್ಟ್‌ಫೋನ್‌ 6GB RAM ವೇರಿಯಂಟ್‌ ಹಾಗೂ 8GB RAM ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಲೂನರ್‌ ಸಿಲ್ವರ್‌ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Mi 10T Price Down from Rs.35,999 to 27,999; Know where and how.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X