ಭಾರತದಲ್ಲಿ ಶಿಯೋಮಿ ಮಿ 10T ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಸಂಸ್ಥೆ ತನ್ನ ಮಿ10T ಮತ್ತು ಮಿ10T ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಜಾಗತಿಕವಾಗಿ ಈಗಾಗಲೇ ಬಿಡುಗಡೆ ಆಗಿದ್ದು. ಭಾರತಕ್ಕೆ ಇದೀಗ ಎಂಟ್ರಿ ನೀಡಿವೆ. ಇನ್ನು ಮಿ 10T ಮತ್ತು ಮಿ 10T ಪ್ರೊ ಸ್ಮಾರ್ಟ್‌ಫೋನ್‌‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆ ತನ್ನ ಮಿ 10T ಮತ್ತು ಮಿ 10T ಪ್ರೊ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು 6.47 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಅನ್ನು ಒಳಗೊಂಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳಲ್ಲಿ ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಶ

ಡಿಸ್‌ಪ್ಲೇ ವಿನ್ಯಾಶ

ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.47 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಮಿ 10ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ , ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, GPS, ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಮತ್ತು ಡ್ಯುಯಲ್ ಸ್ಪೀಕರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್‌ ಏಕೈಕ 8GB RAM + 128GB ರೂಪಾಂತರಕ್ಕೆ ಬೆಲೆ, 39,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಲೂನರ್‌ ಸಿಲ್ವರ್‌ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಅಕ್ಟೋಬರ್ 16 ರಂದು ಮಿ.ಕಾಮ್, ಫ್ಲಿಪ್ಕಾರ್ಟ್, ಮಿ ಹೋಮ್ ಮಳಿಗೆಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಬಿಲಿಯನ್ ಡೇಸ್ ಸೇಲ್‌ ಸಮಯದಲ್ಲಿ, ಮಿ 10 ಟಿ ಸರಣಿಯ ಖರೀದಿದಾರರಿಗೆ ರೂ. 3,000 ಬ್ಯಾಂಕ್ ಕ್ಯಾಶ್‌ಬ್ಯಾಕ್ ಆಗಿ, ಹೆಚ್ಚುವರಿ ರೂ. ವಿನಿಮಯದಲ್ಲಿ 2,000, ಮತ್ತು ನೋ ಕಾಸ್ಟ್‌ ಇಎಂಐ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Mi 10T and Mi 10T Pro smartphones have been launched in India after their global debut in September. The phones follow the Mi 10 and the Mi 10 Pro that were globally unveiled back in March.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X