ಶಿಯೋಮಿ 11 ಲೈಟ್ ಬೆಲೆಯಲ್ಲಿ ಸಖತ್ ರಿಯಾಯಿತಿ!..ಜಬರ್ದಸ್ತ್ ಸ್ಟೋರೇಜ್!
ಜನಪ್ರಿಯ ಶಿಯೋಮಿ ಸಂಸ್ಥೆಯು ಮೀಡ್ ರೇಂಜ್ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಮಿ 11 ಲೈಟ್ ಫೋನ್ ಬೊಂಬಾಟ್ ಫೀಚರ್ಸ್ ಹಾಗೂ ಆಕರ್ಷಕ ಡಿಸೈನ್‌ನಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇದೀಗ ಅಧಿಕೃತ ಮಿ ವೆಬ್‌ಸೈಟ್‌ನಲ್ಲಿ (Mi.com) ಬಿಗ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಅಚ್ಚರಿ ಆಗುವಂತೆ ಮಾಡಿದೆ.
ಹೌದು, ಶಿಯೋಮಿ ಸಂಸ್ಥೆಯು ಮಿ 11 ಲೈಟ್ ಸ್ಮಾರ್ಟ್‌ಫೋನ್ ಅಧಿಕೃತ ಮಿ ವೆಬ್‌ಸೈಟ್‌ನಲ್ಲಿ ಈಗ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 8 GB + 128 GB ಸ್ಟೋರೇಜ್‌ನ ವೇರಿಯಂಟ್ 25,999ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 18,999ರೂ. ಗಳ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ.

ಹಾಗೆಯೇ 6 GB + 128 GB ವೇರಿಯಂಟ್ 16,999ರೂ. ಬೆಲೆಗೆ ಲಭ್ಯ. ಜೊತೆಗೆ ಬ್ಯಾಂಕ್ ರಿಯಾಯಿತಿ ಸಹ ಲಭ್ಯವಾಗಲಿವೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಮಿ 11 ಲೈಟ್ ಸ್ಮಾರ್ಟ್‌ಫೋನ್ 3,200 × 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಗೊರಿಲ್ಲಾ ಗ್ಲಾಸ್ 6 ರಕ್ಷಣೆ ಇದ್ದು, 90Hz ರೀಫ್ರೇಶ್ ರೇಟ್ ಪಡೆದಿದೆ. ಹಾಗೆಯೇ HDR10+ ಹಾಗೂ ಡಾಲ್ಬಿ ವಿಷನ್ ಸಪೋರ್ಟ್ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ ಏನು : ಮಿ 11 ಲೈಟ್ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಅಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ. ಈ ಫೋನ್ 6GB RAM + 128 GB ಮತ್ತು 8GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ : ಮಿ 11 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ : ಮಿ 11 ಲೈಟ್ ಸ್ಮಾರ್ಟ್‌ಫೋನ್ 4,250mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರೊಂದಿಗೆ ವೈ-ಫೈ, 4 ಜಿ, ಬ್ಲೂಟೂತ್ ವಿ 5.1, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಸಹ ಇದೆ.
ಮೆಮೊರಿ ಮತ್ತು ಕಲರ್ ಆಯ್ಕೆ : ಶಿಯೋಮಿ ಮಿ 11 ಲೈಟ್ ಸ್ಮಾರ್ಟ್‌ಫೋನ್ 6 GB RAM + 128 GB ವೇರಿಯಂಟ್ ಹಾಗೂ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ. ಹಾಗೆಯೇ ಈ ಫೋನ್ ಜಾಜ್ ಬ್ಲೂ, ಟಸ್ಕನಿ ಕೋರಲ್ ಮತ್ತು ವಿನೈಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








