ಇಂದು ಶಿಯೋಮಿ ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಬೆಲೆ ಎಷ್ಟು?

|

ಜನಪ್ರಿಯ ಶಿಯೋಮಿ ಕಂಪೆನಿ ಹೊಸದಾಗಿ ಬಿಡುಗಡೆ ಮಾಡಿರುವ ಮಿ 11 ಲೈಟ್ ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್ ಇಂದು (ಜೂ.28) ಮಧ್ಯಾಹ್ನ 12 ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ಅಧಿಕೃತ ಮಿ.ಕಾಮ್‌ ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 21,999ರೂ.ಗಳು ಆಗಿದೆ.

ಶಿಯೋಮಿ

ಹೌದು, ಶಿಯೋಮಿ ಮಿ 11 ಲೈಟ್‌ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಫ್ಲಿಪ್‌ಕಾರ್ಟ್‌ನಲ್ಲಿ ಇಂದು (ಜೂ.28) ನಡೆಯಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹಾಗೂ 33W ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 4,250mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಜಾಜ್‌ ಬ್ಲೂ, ಟಸ್ಕನಿ ಕೋರಲ್ ಮತ್ತು ವಿನೈಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಗೊರಿಲ್ಲಾ ಗ್ಲಾಸ್ 6 ರಕ್ಷಣೆ ಇದ್ದು, 90Hz ರೀಫ್ರೇಶ್‌ ರೇಟ್‌ ಪಡೆದಿದೆ. ಹಾಗೆಯೇ HDR10+ ಹಾಗೂ ಡಾಲ್ಬಿ ವಿಷನ್ ಸಪೋರ್ಟ್‌ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಅಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ 6GB RAM+128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರೊಂದಿಗೆ ವೈ-ಫೈ, 4 ಜಿ, ಬ್ಲೂಟೂತ್ ವಿ 5.1, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 6GB RAM+128GB ವೇರಿಯಂಟ್ ದರವು 21,999 ರೂ. ಆಗಿದೆ. ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 23,999ರೂ.ಗಳಾಗಿದೆ. ಜಾಜ್‌ ಬ್ಲೂ, ಟಸ್ಕನಿ ಕೋರಲ್ ಮತ್ತು ವಿನೈಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್ಕಾರ್ಟ್, ಮಿ.ಕಾಮ್, ಮಿ ಹೋಮ್ ಸ್ಟೋರ್‌ ಮೂಲಕ ಇಂದು ಮಧ್ಯಾಹ್ನ 12 ಗಂಟೆಗೆ ಖರೀದಿಗೆ ಲಭ್ಯವಿರುತ್ತದೆ. ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಅಥವಾ ಈಸಿ ಇಎಂಐ ಮತ್ತು ನೂ ಕಾಸ್ಟ್‌ ಇಎಂಐ ಆಯ್ಕೆಗಳನ್ನು ಬಳಸುವ ಗ್ರಾಹಕರಿಗೆ 1,500 ರೂ. ಡಿಸ್ಕೌಂಟ್‌ ಸಿಗಲಿದೆ.

Best Mobiles in India

English summary
Mi 11 Lite sale in India is taking place today (Monday, June 28) at 12pm. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X