Home
ಸುದ್ದಿಜಾಲ

ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡಿದ್ರೆ ಬರೋಬ್ಬರಿ 10,000 ರೂ. ಉಳಿತಾಯ! 8 GB RAM.. 64 MP ಕ್ಯಾಮೆರಾ..

ಮಿ ಸ್ಮಾರ್ಟ್‌ಫೋನ್‌ಗಳು (Mi Smartphones) ಭಿನ್ನ ಫೀಚರ್ಸ್‌ ಆಯ್ಕೆ ಹೊಂದಿದ್ದು, ಈ ಮೂಲಕ ಭಾರತದಲ್ಲಿ ಸಾಕಷ್ಟು ಗ್ರಾಹಕರನ್ನು ಮಿ ಪಡೆದುಕೊಂಡಿದೆ. ಈ ನಡುವೆ ಬಜೆಟ್‌ ಬೆಲೆಯ ಪ್ರಮುಖ ಫೋನ್‌ವೊಂದಕ್ಕೆ ಇ-ಕಾಮರ್ಸ್‌ ಸೈಟ್‌ನಲ್ಲಿ ಬೆಲೆ ಇಳಿಕೆ ಮಾಡಲಾಗಿದ್ದು, ಈ ಫೋನ್‌ ಖರೀದಿ ಮೇಲೆ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.

ಹೌದು, ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ಗೆ (Mi 11 Lite smartphone) ಇದೀಗ ಭಾರೀ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 8 GB RAM ಆಯ್ಕೆಯೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದು, 64 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾದೊಂದಿಗೆ ಕ್ಯಾಮೆರಾ ಪ್ರಿಯರ ನೆಚ್ಚಿನ ಫೋನ್‌ ಆಗಿ ಗುರುತಿಸಿಕೊಂಡಿದೆ. ಹಾಗಿದ್ರೆ, ಈ ಫೋನ್‌ಗೆ ಇರುವ ಆಫರ್ ಬೆಲೆ ಹಾಗೂ ಇದರ ಪ್ರಮುಖ ಫೀಚರ್ಸ್‌ ಏನು ಅನ್ನೋದನ್ನು ತಿಳಿಯೋಣ ಬನ್ನಿ.

ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡಿದ್ರೆ ಬರೋಬ್ಬರಿ 10,000 ರೂ. ಉಳಿತಾಯ! 8 GB RAM..

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 25,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 15,999 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ ಮೇಲೆ ಪ್ರಮುಖ ಇ-ಕಾಮರ್ಸ್‌ ಸೈಟ್‌ ಆಗಿರುವ ಅಮೆಜಾನ್‌ 38% ರಿಯಾಯಿತಿ ನೀಡಿದ್ದು, ಈ ಮೂಲಕ ನೀವು ಬರೋಬ್ಬರಿ 10000 ರೂ.ಗಳನ್ನು ಉಳಿತಾಯ ಮಾಡಬಹುದಾಗಿದೆ.

ಇಷ್ಟೇ ಅಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5%ಕ್ಯಾಶ್‌ಬ್ಯಾಕ್ ಸಹ ಸಿಗಲಿದ್ದು, ಇದರೊಂದಿಗೆ 699ರೂ. ಮೌಲ್ಯದ FreebieSpotify ಪ್ರೀಮಿಯಂ ಸೌಲಭ್ಯವನ್ನೂ ಸಹ ಪಡೆದುಕೊಳ್ಳಬಹುದಾಗಿದೆ. ಇದರ ಹೊರತಾಗಿ ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಗ್ರಾಹಕರು ಏನಾದರೂ ಎಸಿ ಖರೀದಿ ಮಾಡಲು ಮುಂದಾದರೆ ಅದಕ್ಕೂ ಈ ಮೂಲಕ ರಿಯಾಯಿತಿ ನೀಡಲಾಗುತ್ತದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಏನು ಅನ್ನೋದನ್ನು ತಿಳಿಯೋಣ ಬನ್ನಿ.

ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡಿದ್ರೆ ಬರೋಬ್ಬರಿ 10,000 ರೂ. ಉಳಿತಾಯ! 8 GB RAM..

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.55 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದು 1B ಬಣ್ಣಗಳು, HDR10, 90Hz ರಿಫ್ರೆಶ್‌ ರೇಟ್‌ ಹಾಗೂ 500 ನಿಟ್ಸ್‌ ನಿಂದ 800 ನಿಟ್ಸ್‌ನ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 85.3% ಸ್ಕ್ರೀನ್-ಟು-ಬಾಡಿ ಅನುಪಾತ, 402 ಪಿಪಿಐ ಸಾಂದ್ರತೆಯೊಂದಿಗೆ ಈ ಫೋನ್‌ ಉತ್ತಮವಾಗಿದೆ.

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಕ್ವಾಲ್ಕಾಮ್ SM7150 ಸ್ನಾಪ್ಡ್ರಾಗನ್ 732G (8 nm) ಪ್ರೊಸೆಸರ್‌ ಬಲ ಪಡೆದಿದ್ದು, ಆಂಡ್ರಾಯ್ಡ್ 11, ಎಂಐಯುಐ 12 ಓಎಸ್‌ ಅನ್ನು ರನ್‌ ಮಾಡಲಿದೆ. ಇದರೊಂದಿಗೆ ಅಡ್ರಿನೊ 618 ಗ್ರಾಫಿಕ್ಸ್‌ ಕಾರ್ಡ್‌ ಬಲ ಪಡೆದಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ. ಅಲ್ಲದೆ, ಆಫರ್ ಬೆಲೆಗೆ ಲಭ್ಯ ಇರುವ ಫೋನ್ 128GB ಇಂಟರ್‌ ಸ್ಟೋರೇಜ್‌ ಹಾಗೂ 8GB RAM ಆಯ್ಕೆ ಪಡೆದುಕೊಂಡಿದೆ. ಜೊತೆಗೆ ಎಸ್‌ಡಿಕಾರ್ಡ್ ಮೂಲಕ ಇನ್ನಷ್ಟು ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಬಹುದಾಗಿದೆ.

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ ಪ್ರಮುಖವಾಗಿ 64 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಹಾಗೂ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಡ್ಯುಯಲ್ ಎಲ್ಇಡಿ ಡ್ಯುಯಲ್-ಟೋನ್ ಫ್ಲ್ಯಾಶ್‌, ಹೆಚ್‌ಡಿಆರ್, ಪನೋರಮಾ ಫೀಚರ್ಸ್‌ ಅನ್ನು ಕಾಣಬಹುದು. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 16 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡಿದ್ರೆ ಬರೋಬ್ಬರಿ 10,000 ರೂ. ಉಳಿತಾಯ! 8 GB RAM..

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 4250 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಉಳಿದಂತೆ ಈ ಫೋನ್ ಡ್ಯುಯಲ್ ಸ್ಪೀಕರ್‌ಗಳೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.1, A2DP, LE, ಜಿಪಿಎಸ್, ಗ್ಲೋನಾಸ್, ಬಿಡಿಎಸ್, ಯುಎಸ್‌ಬಿ ಟೈಪ್-ಸಿ ಕನೆಕ್ಟಿವಿಟಿ ಸೌಲಭ್ಯ ಪಡೆದುಕೊಂಡಿದೆ.

Best Mobiles in India

English summary
Mi 11 Lite smartphone has now been given a huge offer. This smartphone will perform well with the 8 GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+