Home
ಸುದ್ದಿಜಾಲ

ಶಿಯೋಮಿ ಮಿ11 ಸ್ಮಾರ್ಟ್‌ಫೋನ್‌ ಅನಾವರಣ!..2K WQHD+ ಡಿಸ್‌ಪ್ಲೇ ವಿಶೇಷ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಶಿಯೋಮಿ ಇದೀಗ ತನ್ನ ಹೊಸ ಮಿ11 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ವರ್ಚುವಲ್ ಈವೆಂಟ್ ಮೂಲಕ ಮಿ 11 ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಇದು ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಆಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ಶಿಯೋಮಿ

ಹೌದು, ಶಿಯೋಮಿ ತನ್ನ ಮಿ11 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಪಂಚ್-ಹೋಲ್‌ ವಿನ್ಯಾಸ ಮತ್ತು 2K ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಮಿ 11 ಸಹ 256GB ವರೆಗೆ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದು ನಾಲ್ಕು ಬದಿಗಳಲ್ಲಿ ಬಾಗಿದ ಅಂಚುಗಳನ್ನು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಹರ್ಮನ್ ಕಾರ್ಡನ್ ಚಾಲಿತ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಶಿಯೋಮಿ ಮಿ11 ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81-ಇಂಚಿನ 2K WQHD + ಡಿಸ್‌ಪ್ಲೇ ಹೊಂದಿದೆ. ಇದು 1,500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ನೊಂದಿಗೆ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 480Hz ವರೆಗಿನ ಟಚ್ ಸ್ಯಾಂಪ್ಲಿಂಗ್ ರೇಟ್‌ಅನ್ನು ಸಹ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಮಿ11 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಮಾಹಿತಿ ಇಲ್ಲ.

ಕ್ಯಾಮೆರಾ

ಕ್ಯಾಮೆರಾ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ 123 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರ , ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ‘ಟೆಲಿಮಾಕ್ರೊ' ಶೂಟರ್ ಅನ್ನು ಸಹ ಒಳಗೊಂಡಿದೆ. ಅಲ್ಲದೆ ಇದು ಮ್ಯಾಜಿಕ್ ಜೂಮ್, ಟೈಮ್ ಫ್ರೀಜ್, ಪ್ಯಾರೆಲಲ್ ವರ್ಲ್ಡ್, ಮತ್ತು ಫ್ರೀಜ್ ಫ್ರೇಮ್ ಸೇರಿದಂತೆ ಕೃತಕ ಬುದ್ಧಿಮತ್ತೆ (ಎಐ) ಫೀಚರ್ಸ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮಿ 11 ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಮಿ ಟರ್ಬೊಚಾರ್ಜ್‌ 55W ವೈರ್ಡ್‌ ಮತ್ತು 50W ವಾಯರ್‌ಲೆಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6E, ಬ್ಲೂಟೂತ್ 5.2, ಇನ್ಫ್ರಾರೆಡ್ (IR) ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ11 ಸ್ಮಾರ್ಟ್‌ಫೋನ್‌ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಬೆಲೆಯನ್ನು ಯುರೋ 749 (ಸರಿಸುಮಾರು ರೂ. 65,800) ನಿಗದಿಪಡಿಸಿದರೆ, 8GB RAM + 256GB ಶೇಖರಣಾ ಮಾದರಿಯ ಬೆಲೆ ಯುರೋ 799 (ಸರಿಸುಮಾರು 70,100 ರೂ.)ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ಲೌಡ್ ವೈಟ್, ಹರೈಸನ್ ಬ್ಲೂ ಮತ್ತು ಮಿಡ್‌ನೈಟ್ ಗ್ರೇ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Mi 11 With Triple Rear Cameras Launched Globally.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+