ಶಿಯೋಮಿಯ ಹೊಸ ಮಿ 11i ಸ್ಮಾರ್ಟ್‌ಫೋನ್ ಲಾಂಚ್: 108ಎಂಪಿ ಕ್ಯಾಮೆರಾ!
ಶಿಯೋಮಿ ಕಂಪನಿಯು ಮಿ 11 ಸರಣಿಯಲ್ಲಿ ಮಿ 11 ಅಲ್ಟ್ರಾ, ಮಿ 11 ಪ್ರೊ ಹಾಗೂ ಮಿ 11 ಲೈಟ್ 5G ಹೆಸರಿನ ಮೂರು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಸಿದೆ. ಅದೇ ಸರಣಿಯಲ್ಲಿ ಹೊಸದಾಗಿ ಮಿ 11i ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಹಿಂಬದಿಯ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಡಿವೈಸ್‌ನಿಂದಲೂ ಆಕರ್ಷಕ ಲುಕ್‌ನಲ್ಲಿದೆ.

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 4,520mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಮಿ 11i ಸ್ಮಾರ್ಟ್‌ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ E4 AMOLED ಡಿಸ್‌ಪ್ಲೇ ಹೊಂದಿದೆ. ಫೋನಿನ ಡಿಸ್‌ಪ್ಲೇ 20:9 ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಒಳಗೊಂಡಿದೆ.

ಯಾವ ಪ್ರೊಸೆಸರ್
ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಅಡ್ರೆನೋ 660 GPU ಸಪೋರ್ಟ್ ಪಡೆದಿದೆ. 8GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಅನ್ನು ಹೊಂದಿದೆ.

ಸ್ಪೆಷಲ್ ಕ್ಯಾಮೆರಾ
ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್, ಮೂರು ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಸೌಂಡ್ ಫೀಚರ್ಸ್
ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ 4,520mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್‌ಟಿಇ, ವೈ-ಫೈ 6, ಬ್ಲೂಟೂತ್ ವಿ 5.2, ಎನ್‌ಎಫ್‌ಸಿ, ಇನ್ಫ್ರಾರೆಡ್ (ಐಆರ್) ಬ್ಲಾಸ್ಟರ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ - ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ ಮಿ 11i ಸ್ಮಾರ್ಟ್‌ಫೋನ್ 8GB + 128GB ವೇರಿಯಂಟ್ ಬೆಲೆಯು EUR 649 ಆಗಿದೆ (ಭಾರತದಲ್ಲಿ ಅಂದಾಜು 55,900ರೂ.ಗಳು ಎನ್ನಲಾಗಿದೆ) . ಇನ್ನು ಈ ಫೋನ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಭಾರತದಲ್ಲಿ ಯಾವಾಗ ಲಾಂಚ್ ಎನ್ನುವ ಬಗ್ಗೆ ಕಂಪನಿಯು ಮಾಹಿತಿ ತಿಳಿಸಿಲ್ಲ.


Click it and Unblock the Notifications



