ಶಿಯೋಮಿಯ ಈ ಬೆಸ್ಟ್ ಕ್ಯಾಮೆರಾ ಫೋನಿನ ಆಫರ್ ಬೆಲೆ ತಿಳಿದ್ರೆ, ವಾವ್ ಅಂತೀರಾ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಫರ್ ಲಭ್ಯ ಇರುತ್ತದೆ. ಹೀಗಾಗಿ ಅನೇಕರು ಆನ್‌ಲೈನ್ ಮೂಲಕ ಹೊಸ ಫೋನ್ ಖರೀದಿಗೆ ಮುಂದಾಗುತ್ತಾರೆ. ಸದ್ಯ ಅಮೆಜಾನ್ ತಾಣದಲ್ಲಿ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಜಬರ್ದಸ್ತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಪ್ರಮುಖ ಇ ಕಾಮರ್ಸ್ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಮಿ 11X ಸ್ಮಾರ್ಟ್‌ಫೋನ್ ಶೇ. 41% ರಷ್ಟು ರಿಯಾಯಿತಿ ಸಿಗುತ್ತದೆ. ಇದಲ್ಲದೇ ಅಮೆಜಾನ್‌ನಲ್ಲಿ ಲಭ್ಯ ಇರುವ ಎಕ್ಸ್‌ಚೆಂಜ್ ಕೊಡುಗೆ, ಬ್ಯಾಂಕ್ ಆಫರ್ ಹಾಗೂ ಇತರೆ ಪಡೆದರೆ 21,999ರೂ. ಗಳಿಗೆ ಖರೀದಿಸಬಹುದು.

ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್ ಪವರ್‌ನೊಮದಿಗೆ ಕಾರ್ಯ ನಿರ್ವಹಿಸಲಿದ್ದು, ಇದರ ಜೊತೆಗೆ 4,520 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹೀಗಿದೆ
ಮಿ 11X ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಪಡೆದಿದೆ.

ಪ್ರೊಸೆಸರ್ ಬಲ ಹೇಗಿದೆ
ಶಿಯೋಮಿಯ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಶಿಯೋಮಿಯ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ ಹೀಗಿವೆ
ಮಿ 11X ಮೊಬೈಲ್ 4,520 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್ ಇದೆ.
ಮೆಮೊರಿ ಮತ್ತು ಕಲರ್ ಆಯ್ಕೆ
ಮಿ 11X ಫೋನ್ 6GB RAM + 128 GB ಹಾಗೂ 8GB RAM + 128 GB RAM ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಮೊಬೈಲ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳ ಆಯ್ಕೆ ಪಡೆದುಕೊಂಡಿದೆ.


Click it and Unblock the Notifications








