ಶಿಯೋಮಿ ರೆಡ್‌ಮಿ ನೋಟ್‌ 10 ಲೈಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಜನಪ್ರಿಯ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ಶಿಯೋಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿರುವ ಶಿಯೋಮಿ ಸದ್ಯ ಇದೀಗ ತನ್ನ ಮಿ 10 ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮತ್ತೆ ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟುಹಾಕಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಹೊಸ ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ರೆಡ್‌ಮಿ ಬ್ರ್ಯಾಂಡ್‌ನಲ್ಲಿ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ ಆಗಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಂದಿನ ಮಿ ಸ್ಮಾರ್ಟ್‌ಫೋನ್‌ಗಳಲ್ಲಿ ಲಭ್ಯವಿರುವ 3D ಬಾಗಿದ AMOLED ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್‌ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆಡ್‌ಮಿ ನೋಟ್‌ 10 ಲೈಟ್‌ ಸ್ಮಾರ್ಟ್‌ಫೋನ್‌ 1080 x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.47 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಆಗಿದ್ದು, ಬಾಗಿದ ಅಮೋಲೆಡ್‌ ಡಿಸ್‌ಪ್ಲೇ ವಿನ್ಯಾಸವನ್ನ ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19.5:9 ರ ಅನುಪಾತವನ್ನ ಹೊಂದಿದ್ದು, ಇದು HDR 10 ಅನ್ನು ಬೆಂಬಲಿಸುತ್ತದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 730G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಅನ್ನು MIUI 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಅವಕಾಶ ನೀಡಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಎರಡು ಎಲ್ಇಡಿ ಫ್ಲ್ಯಾಷ್ ಮಾಡ್ಯೂಲ್‌ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ ಮಿ ನೋಟ್‌ 10 ಲೈಟ್‌ ಸ್ಮಾರ್ಟ್‌ಫೋನ್‌ 5,260mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮತ್ತು ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ 6GB RAM + 64GB ಇಂಟರ್‌ ಸ್ಟೋರೇಜ್ ರೂಪಾಂತರಕ್ಕಾಗಿ ಯುರೋ 349 (ಸುಮಾರು ರೂ. 28,500) ಬೆಲೆಯನ್ನು ನಿಗದಿಪಡಿಸಲಾಗಿದೆ. ಫೋನ್‌ನ 6GB RAM + 128GB ಮಾದರಿಯು ಯುರೋ 399 (ಸುಮಾರು ರೂ. 32,600)ಬೆಲೆಯನ್ನು ಹೊಂದಿದ್ದು, ಇನ್ನು ಈ ಸ್ಮಾರ್ಟ್‌ಫೋನ್‌ ಮಿಡ್ನೈಟ್ ಬ್ಲ್ಯಾಕ್, ನೆಬ್ಯುಲಾ ಪರ್ಪಲ್ ಮತ್ತು ಗ್ಲೇಸಿಯರ್ ವೈಟ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

Best Mobiles in India

English summary
Mi Note 10 Lite price is set at EUR 349 for the base 6GB + 64GB storage variant.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X