ಮೈಕ್ರೋಮ್ಯಾಕ್ಸ್‌ ಬೋಲ್ಟ್‌ S300 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕಂಪೆನಿಗಳಲ್ಲಿ ಮೈಕ್ರೋಮ್ಯಾಕ್ಸ್‌ ಕಂಪೆನಿ ಕೂಡ ಒಂದಾಗಿದೆ. ಸದ್ಯ ಈಗಾಗಲೇ ಟೆಕ್‌ ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ ಸಾಕಷ್ಟು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ನಾವು ನೋಡಬಹುದಾಗಿದೆ. ಜೊತೆಗೆ ತಮ್ಮ ಆಕರ್ಷಕ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನ ಗಮನ ಸೆಳೆದಿವೆ. ಇನ್ನು ಮೈಕ್ರೋಮ್ಯಾಕ್ಸ್‌ ಕೂಡ ತನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನ ಸೆಲೆದಿವೆ. ಸದ್ಯ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೈಕ್ರೋಮ್ಯಾಕ್ಸ್‌ ಬೋಲ್ಟ್ S300 ಸ್ಮಾರ್ಟ್‌ಫೋನ್‌ 480 × 800 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 4 ಇಂಚಿನ ಡಿಸ್‌ಪ್ಲೇ ಸೆಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 233 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಕ್ಯಾಪ್‌ಸಿಟಿವ್‌ ಟಚ್‌ಸ್ಕ್ರೀನ್‌ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಎಲ್‌ಸಿಡಿ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 256k ಕಲರ್‌ ರಿ ಪ್ರೊಡಕ್ಷನ್‌ ಅನ್ನು ಹೊಂದಿದೆ. ಇನ್ನು ಇ ಡಿಸ್‌ಪ್ಲೇ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಹುಡ್ ಅಡಿಯಲ್ಲಿ 1GHz ಸ್ಪ್ರೆಡ್‌ಟ್ರಮ್ SC 7715 ಸಿಂಗಲ್-ಕೋರ್ ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದೆ. ಅಲ್ಲದೆ ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4.3 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 512MB RAM ಮತ್ತು 4GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 32GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ S300 ಸ್ಮಾರ್ಟ್‌ಫೋನ್‌ 0.3 ಮೆಗಾ ಪಿಕ್ಸೆಲ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಜೊತೆಗೆ 0.3 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಅಲ್ಲದೆ 1,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 3.5 ಗಂಟೆಗಳ ಟಾಕ್‌ಟೈಮ್ ಮತ್ತು ಸ್ಟ್ಯಾಂಡ್‌ಬೈ ಸಮಯವನ್ನು 150 ಗಂಟೆಗಳವರೆಗೆ ಬಾಳಿಕೆ ಬರುತ್ತದೆ ಎಂದು ಕಂಪೆನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಕಾರ್ಡ್ ಸ್ಲಾಟ್‌ಗಳು, 3G, ವೈ-ಫೈ, ಜಿಪಿಎಸ್, ಬ್ಲೂಟೂತ್ 2.1 ಮತ್ತು ಸಾಮಾನ್ಯ ಮೈಕ್ರೋ-ಯುಎಸ್‌ಬಿ ಸ್ಲಾಟ್ ಸೇರಿವೆ. ಇನ್ನು ಈ ಸ್ಮಾರ್ಟ್‌ಫೋನ್‌ 3,300ರೂ ಬೆಲೆಯನ್ನ ಹೊಂದಿದೆ.

Best Mobiles in India

English summary
Micromax has come up with yet another budget smartphone in the Bolt series called the Bolt S300.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X