ಮೈಕ್ರೋಮ್ಯಾಕ್ಸ್‌ನಿಂದ ಕೈಗೆಟಕುವ ಬೆಲೆಯ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ!
ಬಜೆಟ್ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳಿಗೆ ಮೈಕ್ರೋಮ್ಯಾಕ್ಸ್ ಸಂಸ್ಥೆ ಹೆಸರುವಾಸಿಯಾಗಿದೆ. ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಬಜೆಟ್ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮೈಕ್ರೋಮ್ಯಾಕ್ಸ್ ಸಂಸ್ಥೆ ತನ್ನ ಹೊಸ ಕ್ಯಾನ್ವಾಸ್ ನೈಟ್ರೋ 2 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಈ ಹಿಂದೆ ಬಿಡುಗಡೆ ಆಗಿದ್ದ ಕ್ಯಾನ್ವಾಸ್ ನೈಟ್ರೊ ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಸದ್ಯ ಭಾರತದಲ್ಲಿ ಇದರ ಬೆಲೆ 10,990 ರೂ. ಆಗಿದೆ.

ಹೌದು, ಮೈಕ್ರೋಮ್ಯಾಕ್ಸ್ ಸಂಸ್ಥೆ ತನ್ನ ಹೊಸ ಕ್ಯಾನ್ವಾಸ್ ನೈಟ್ರೋ 2 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿರುವ 5 ಇಂಚಿನ ಹೆಚ್‌ಡಿ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 2GB RAM+ 16GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಕ್ಯಾನ್ವಾಸ್ ನೈಟ್ರೋ 2 ಸ್ಮಾರ್ಟ್‌ಫೋನ್ 720p ರೆಸಲ್ಯೂಶನ್ ಅನ್ನು ಹೊಂದಿದೆ. ಇದು 5 ಇಂಚಿನ ಹೆಚ್‌ಡಿ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ವಿಡಿಯೋ ಕರೆ ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು 1.4GHz ಮೀಡಿಯಾ ಟೆಕ್ ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 2GB RAM ಮತ್ತು 16GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 32GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಕ್ಯಾನ್ವಾಸ್ ನೈಟ್ರೋ 2 ಆಟೋ-ಫೋಕಸ್ ಮತ್ತು ಎಲ್ಇಡಿ ಫ್ಲ್ಯಾಷ್ ಹೊಂದಿರುವ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 2,400mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 9 ಗಂಟೆಗಳ ಟಾಕ್‌ಟೈಮ್ ಮತ್ತು 250 ಗಂಟೆಗಳ ಸ್ಟ್ಯಾಂಡ್‌ಬೈ ಟೈ ಅನ್ನು ನೀಡಲಿದೆ ಎಂದು ಮೈಕ್ರೋಮ್ಯಾಕ್ಸ್ ಕಂಪೆನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 3G ಸಪೋರ್ಟ್, ವೈ-ಫೈ ಮತ್ತು ಬ್ಲೂಟೂತ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಕ್ಯಾನ್ವಾಸ್ ನೈಟ್ರೋ 2 ಸ್ಮಾರ್ಟ್‌ಫೋನ್ ಭಾರತದಲ್ಲಿ 10,990 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ ಇಂದಿನಿಂದ ಭಾರತದ ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಲು ಲಭ್ಯವಾಗಲಿದೆ.


Click it and Unblock the Notifications