ಇಂದು ಮೈಕ್ರೋಮ್ಯಾಕ್ಸ್ ಇನ್ 1 ಫೋನಿನ ಫಸ್ಟ್ ಸೇಲ್: ಆಕರ್ಷಕ ಬೆಲೆ!
ಮೈಕ್ರೋಮ್ಯಾಕ್ಸ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ.26) ಮಧ್ಯಾಹ್ನ 12ಗಂಟೆಗೆ ಜನಪ್ರಿಯ ಫ್ಲಿಪ್‌ಕಾರ್ಟ್ ತಾಣದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಹೊಂದಿದೆ.

ಹೌದು, ಮೈಕ್ರೋಮ್ಯಾಕ್ಸ್‌ನ ನೂತನ ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಮೊದಲ ಮಾರಾಟ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಅನ್ನು ಹೊಂದಿದೆ. ಹಾಗೂ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಈ ಫೋನಿನ ಆರಂಭಿಕ ಬೆಲೆಯು 10,499ರೂ.ಗಳು ಆಗಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ, ಮತ್ತು 1.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 80 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಕಂಪನಿಯು ಈ ವರ್ಷದ ಮೇ ವೇಳೆಗೆ ಆಂಡ್ರಾಯ್ಡ್ 11 ಗೆ ಅಪ್‌ಗ್ರೇಡ್ ಮಾಡುವ ಭರವಸೆ ನೀಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ವಿಶೇಷತೆ
ಮೈಕ್ರೊಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4G, ಡ್ಯುಯಲ್-VOLTE, ಬ್ಲೂಟೂತ್ 5.0, GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೈಕ್ರೋಮ್ಯಾಕ್ಸ್ ಇನ್ 1 ಸಹ ಎಲ್ 1 ವೈಡ್‌ವೈನ್ ಬೆಂಬಲದೊಂದಿಗೆ ಬರುತ್ತದೆ ಅಂದರೆ ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಇತರ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದು ಹೆಚ್‌ಡಿ ವಿಷಯವನ್ನು ಪ್ಲೇ ಮಾಡಬಹುದು.
ಬೆಲೆ ಮತ್ತು ಲಭ್ಯತೆ
ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಇಂಟರ್ ಸ್ಟೋರೇಜ್ ಆಯ್ಕೆಗೆ 10,499 ರೂ ಬೆಲೆಯನ್ನು ಹೊಂದಿದೆ. ಇನ್ನು 6GB RAM + 128GB ಇಂಟರ್ ಸ್ಟೋರೇಜ್ ಆಯ್ಕೆಯ ಟಾಪ್ ಮಾಡೆಲ್ ಬೆಲೆ 11,999 ರೂ. ಆಗಿದೆ. ಇದು ನೀಲಿ ಮತ್ತು ನೇರಳೆ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ, ಇದು ಗ್ರೇಡಿಯಂಟ್ ಬ್ಯಾಕ್‌ನೊಂದಿಗೆ ಎಕ್ಸ್ ಪ್ಯಾಟರ್ನ್ ಹೊಂದಿದೆ.


Click it and Unblock the Notifications