ಭಾರತದಲ್ಲಿ ಬಜೆಟ್‌ ಬೆಲೆಯ ಮೈಕ್ರೋಮ್ಯಾಕ್ಸ್‌ ಇನ್‌ 1 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಭಾರತದ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಮೈಕ್ರೋಮ್ಯಾಕ್ಸ್‌ ಕಂಪೆನಿ ತನ್ನ ಇನ್‌ ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಸದ್ಯ ಹೊಸದಾಗಿ ಮೈಕ್ರೊಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಮಾಡಲಾಗಿದೆ. ಇದು ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್‌ ಆಗಿದ್ದು, ಫೋನ್ ಹಿಂಭಾಗದಲ್ಲಿ ಎಕ್ಸ್ ಮಾದರಿಯೊಂದಿಗೆ ಮೆಟಾಲಿಕ್‌ ಫಿನಿಶ್‌ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ.

ಮೈಕ್ರೋಮ್ಯಾಕ್ಸ್‌

ಹೌದು, ಮೈಕ್ರೋಮ್ಯಾಕ್ಸ್‌ ಸಂಸ್ಥೆ ಹೊಸ ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G 80SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಎರಡು RAM ಮತ್ತು ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎರಡು ಬಣ್ಣಗಳ ಆಯ್ಕೆಗಳಲ್ಲಿ ಬರಲಿದ್ದು, ಇದು ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ, ಮತ್ತು 1.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 80 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಕಂಪನಿಯು ಈ ವರ್ಷದ ಮೇ ವೇಳೆಗೆ ಆಂಡ್ರಾಯ್ಡ್ 11 ಗೆ ಅಪ್‌ಗ್ರೇಡ್ ಮಾಡುವ ಭರವಸೆ ನೀಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಮೈಕ್ರೊಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4G, ಡ್ಯುಯಲ್-VOLTE, ಬ್ಲೂಟೂತ್ 5.0, GPS ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೈಕ್ರೋಮ್ಯಾಕ್ಸ್ ಇನ್ 1 ಸಹ ಎಲ್ 1 ವೈಡ್‌ವೈನ್ ಬೆಂಬಲದೊಂದಿಗೆ ಬರುತ್ತದೆ ಅಂದರೆ ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಇತರ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದು ಹೆಚ್‌ಡಿ ವಿಷಯವನ್ನು ಪ್ಲೇ ಮಾಡಬಹುದು.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 4GB RAM + 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 10,499 ರೂ ಬೆಲೆಯನ್ನು ಹೊಂದಿದೆ. ಇನ್ನು 6GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಟಾಪ್ ಮಾಡೆಲ್ ಬೆಲೆ 11,999 ರೂ. ಆಗಿದೆ. ಇದು ನೀಲಿ ಮತ್ತು ನೇರಳೆ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ, ಇದು ಗ್ರೇಡಿಯಂಟ್ ಬ್ಯಾಕ್‌ನೊಂದಿಗೆ ಎಕ್ಸ್ ಪ್ಯಾಟರ್ನ್ ಹೊಂದಿದೆ. ಇನ್ನು ಮೈಕ್ರೋಮ್ಯಾಕ್ಸ್ ಇನ್ 1 ಮಾರ್ಚ್ 26 ರಿಂದ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮತ್ತು ಮೈಕ್ರೋಮ್ಯಾಕ್ಸ್ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Micromax In 1 has launched in India as the latest budget friendly offering from the company, with impressive specifications.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X