Just In
Don't Miss
- Movies
ಸಲಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಸ್ಟಾರ್ ನಟ: ವಿಲನ್ ಪಾತ್ರದಲ್ಲಿ ಖ್ಯಾತ ಹೀರೋ?
- News
ಬೆಂಗಳೂರಿಗಾಗಿ ಹೊಸ ಮಾಸ್ಟರ್ಪ್ಲ್ಯಾನ್ ಸಿದ್ಧಪಡಿಸುತ್ತಿರುವ ಬಿಡಿಎ
- Sports
ಸ್ಟೀವ್ ಸ್ಮಿತ್ ಮತ್ತೆ ನಾಯಕನಾಗುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ ಇಯಾನ್ ಚಾಪೆಲ್
- Finance
ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
- Automobiles
ಜನರ ಅಸೂಯೆಗೆ ಬಲಿಪಶುವಾದ ಸೂಪರ್ ಬೈಕ್ ಸವಾರ
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಂದು ಅಗ್ಗದ ಬೆಲೆಯ ಮೈಕ್ರೋಮ್ಯಾಕ್ಸ್ In 1B ಫೋನ್ ಫಸ್ಟ್ ಸೇಲ್!
ಮೈಕ್ರೋಮ್ಯಾಕ್ಸ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಮೈಕ್ರೋಮ್ಯಾಕ್ಸ್ In ಸ್ಮಾರ್ಟ್‌ಫೋನ್ ಸರಣಿಯು ಎರಡು ಮಾಡೆಲ್‌ಗಳನ್ನು ಒಳಗೊಂಡಿದೆ. ಅವುಗಳಲ್ಲಿ ಅಗ್ಗದ ದರದಲ್ಲಿ ಗ್ರಾಹಕರ ಗಮನ ಸೆಳೆದಿರುವ ಮೈಕ್ರೋಮ್ಯಾಕ್ಸ್ In 1B ಸ್ಮಾರ್ಟ್‌ಫೋನ್ ಇಂದು (ನ.26) ಫ್ಲಿಪ್‌ಕಾರ್ಟ್ ಹಾಗೂ ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಫಸ್ಟ್ ಸೇಲ್ ಶುರುಮಾಡಲಿದೆ.

ಹೌದು, ಮೈಕ್ರೋಮ್ಯಾಕ್ಸ್‌ನ ನೂತನ ಮೈಕ್ರೋಮ್ಯಾಕ್ಸ್ In 1B ಸ್ಮಾರ್ಟ್‌ಫೋನ್ ಮೊದಲ ಮಾರಾಟ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ 6GB + 64GB ಮತ್ತು 8GB + 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಅನ್ನು ಹೊಂದಿದೆ. ಹಾಗೂ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಈ ಫೋನಿನ ಆರಂಭಿಕ ಬೆಲೆಯು 6,999ರೂ.ಗಳು ಆಗಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಮೈಕ್ರೋಮ್ಯಾಕ್ಸ್ ಇನ್ 1B ಸ್ಮಾರ್ಟ್‌ಫೋನ್ 720 x 1560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ರಚನೆ ಅನುಪಾತ 19.5:9 ಆಗಿದ್ದು, 264PPI ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ಮೈಕ್ರೋಮ್ಯಾಕ್ಸ್ ಇನ್ 1B ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 2GBRAM+32GB, ಮತ್ತು 4GB RAM+64GB, ವೇರಿಯೆಂಟ್ ಆಯ್ಕೆಯ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಸಹ ನೀಡಲಾಗಿದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್
ಮೈಕ್ರೋಮ್ಯಾಕ್ಸ್ ಇನ್ 1B ಸ್ಮಾರ್ಟ್‌ಫೊನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್ ಆಂಗಲ್ ಲೆನ್ಸ್, ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಡೆಪ್ತ್ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೈಕ್ರೋಮ್ಯಾಕ್ಸ್ ಇನ್ 1B ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್ ಮತ್ತು ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಜಿಪಿಎಸ್ , ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಇನ್ನು ಫೋನ್ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೈಕ್ರೊಮ್ಯಾಕ್ಸ್ ಇನ್ 1B ಸ್ಮಾರ್ಟ್‌ಫೋನ್ 2GB RAM + 32GB ಸ್ಟೋರೇಜ್ ರೂಪಾಂತರದ ಬೆಲೆಯು 6,999 ರೂ. ಆಗಿದೆ. ಇದರ 4GB RAM + 64GB ಸ್ಟೋರೇಜ್ ಆವೃತ್ತಿಯ ಬೆಲೆ 7,999 ರೂ. ಆಗಿದೆ. ಇನ್ನು ಮೈಕ್ರೊಮ್ಯಾಕ್ಸ್ ಇನ್ 1B ಮೂರು ವಿಭಿನ್ನ ಬಣ್ಣ ಆಯ್ಕೆಗಳನ್ನು ಹೊಂದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190