Home
ಸುದ್ದಿಜಾಲ

ಮೈಕ್ರೋಮ್ಯಾಕ್ಸ್ ಸಂಸ್ಥೆಯ ಈ ಅಗ್ಗದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಏರಿಕೆ!

ಪ್ರಸ್ತುತ ಮೊಬೈಲ್‌ ಮಾರುಕಟ್ಟೆಯಲ್ಲಿ ಭಾರೀ ಪೈಪೋಟಿಯ ವಾತಾವರಣ ಇದ್ದು, ಪ್ರಮುಖ ಮೊಬೈಲ್ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಸರ್ಕಸ್ ಮಾಡುತ್ತ ಸಾಗಿವೆ. ಮುಖ್ಯವಾಗಿ ಅಗ್ಗದ ಬೆಲೆಯಲ್ಲಿ ಇಲ್ಲವೇ ಬಜೆಟ್‌ ಪ್ರೈಸ್‌ನಲ್ಲಿ ಆಕರ್ಷಕ ಫೀಚರ್ಸ್‌ಗಳಿರುವ ಫೋನ್‌ ಲಾಂಚ್ ಮಾಡುತ್ತಿವೆ. ಅದಾಗ್ಯೂ ಕೆಲವು ಕಂಪನಿಗಳ ಸ್ಮಾರ್ಟ್‌ಫೋನ್‌ಗಳು ಮಾತ್ರ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿ ಆಗುತ್ತವೆ. ಹೀಗೆ ಗ್ರಾಹಕರನ್ನು ಆಕರ್ಷಿಸಿರುವ ಮೈಕ್ರೋಮ್ಯಾಕ್ಸ್ ಕಂಪನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಏರಿಕೆ ಕಂಡು ಬಂದಿದೆ.

ವೇರಿಯಂಟ್‌

ಹೌದು, ಮೈಕ್ರೊಮ್ಯಾಕ್ಸ್ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಮೈಕ್ರೋಮ್ಯಾಕ್ಸ್ ಇನ್ 2B ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಏರಿಕೆ ಆಗಿದೆ. ಈ ಫೋನ್ 4GB+64GB ಮತ್ತು 6GB+64GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಎರಡು ವೇರಿಯಂಟ್‌ ದರದಲ್ಲಿಯೂ ಈಗ 500ರೂ.ಗಳ ಏರಿಕೆ ಕಂಡಿದೆ. ದರ ಏರಿಕೆಯಿಂದಾಗಿ 4GB+64GB ವೇರಿಯಂಟ್ ಫೋನ್ 8,499ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 6GB+64GB ವೇರಿಯಂಟ್‌ ಫೋನ್ 9,499ರೂ.ಗಳ ಪ್ರೈಸ್‌ಟ್ಯಾಗ್ ಹೊಂದಿದೆ. ಹಾಗಾದರೇ ಮೈಕ್ರೋಮ್ಯಾಕ್ಸ್ ಇನ್ 2B ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಮೈಕ್ರೋಮ್ಯಾಕ್ಸ್ ಇನ್‌ 2B ಸ್ಮಾರ್ಟ್‌ಫೋನ್‌ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್ನೆಸ್, 89% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 20:9 ರಚನಯೆ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯವೇನು

ಪ್ರೊಸೆಸರ್‌ ಸಾಮರ್ಥ್ಯವೇನು

ಮೈಕ್ರೋಮ್ಯಾಕ್ಸ್ ಇನ್‌ 2B ಸ್ಮಾರ್ಟ್‌ಫೋನ್ ಯುನಿಸಾಕ್ ಟಿ 610 ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯೆಲ್‌ ಕ್ಯಾಮೆರಾ

ಡ್ಯುಯೆಲ್‌ ಕ್ಯಾಮೆರಾ

ಮೈಕ್ರೊಮ್ಯಾಕ್ಸ್ ಇನ್‌ 2B ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಕ್ಯಾಮೆರಾ ವೈಶಿಷ್ಟ್ಯಗಳಲ್ಲಿ ನೈಟ್ ಮೋಡ್, ಹಿನ್ನೆಲೆ ಭಾವಚಿತ್ರ, ಸೌಂದರ್ಯ ಮೋಡ್, ಚಲನೆಯ ಫೋಟೋ, ಪ್ಲೇ ಮತ್ತು ವಿರಾಮ ವೀಡಿಯೊ ಶೂಟ್, ಮತ್ತು ಪೂರ್ಣ-ಎಚ್ಡಿ ಫ್ರಂಟ್ ಮತ್ತು ಬ್ಯಾಕ್ ರೆಕಾರ್ಡಿಂಗ್ ಸೇರಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೈಕ್ರೊಮ್ಯಾಕ್ಸ್ ಇನ್‌ 2B ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 160 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್, 20 ಗಂಟೆಗಳ ವೆಬ್ ಬ್ರೌಸಿಂಗ್, 15 ಗಂಟೆಗಳ ವೀಡಿಯೊ ಸ್ಟ್ರೀಮಿಂಗ್ ಮತ್ತು 50 ಗಂಟೆಗಳ ಟಾಕ್ಟೈಮ್ ಅನ್ನು ನೀಡುತ್ತದೆ ಎಂದು ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ VoWiFi, ಡ್ಯುಯಲ್ VoLTE, Wi-Fi 802.11 ac, ಬ್ಲೂಟೂತ್ v5, ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ.

Best Mobiles in India

English summary
Micromax In 2B Price In India Hiked By Rs 500: Check New Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+