ಭಾರತದಲ್ಲಿ ಅಗ್ಗದ ಬೆಲೆಯ ಮೈಕ್ರೊಮ್ಯಾಕ್ಸ್ ಇನ್‌ 2b ಸ್ಮಾರ್ಟ್‌ಫೋನ್‌ ಲಾಂಚ್‌!

|

ಸ್ವದೇಶಿ ಮೊಬೈಲ್‌ ಕಂಪೆನಿ ಮೈಕ್ರೋಮ್ಯಾಕ್ಸ್‌ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದೀಗ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್ 2b ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಬಿಡುಗಡೆಯಾದ ಮೈಕ್ರೋಮ್ಯಾಕ್ಸ್ ಇನ್ 1b ಗೆ ಇದು ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಇದು ಯುನಿಸೋಕ್ T610 SoC ಪ್ರೊಸೆಸರ್‌ ಬಲವನ್ನು ಪಡದುಕೊಂಡಿದೆ.

ಮೈಕ್ರೋಮ್ಯಾಕ್ಸ್‌

ಹೌದು, ಮೈಕ್ರೋಮ್ಯಾಕ್ಸ್‌ ಕಂಪೆನಿ ಭಾರತದಲ್ಲಿ ಹೊಸ ಮೈಕ್ರೋಮ್ಯಾಕ್ಸ್‌ ಇನ್‌ 2b ಯನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್‌ ಆರಂಭಿಕ ಬೆಲೆ 7,999 ರೂ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಇ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಮೈಕ್ರೊಮ್ಯಾಕ್ಸ್ ಇನ್‌ 2b ಸ್ಮಾರ್ಟ್‌ಫೋನ್‌ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್ನೆಸ್, 89% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 20:9 ರಚನಯೆ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಈ ಸ್ಮಾರ್ಟ್‌ಫೋನ್ ಯುನಿಸಾಕ್ ಟಿ 610 ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯೆಲ್‌ ಕ್ಯಾಮೆರಾ

ಡ್ಯುಯೆಲ್‌ ಕ್ಯಾಮೆರಾ

ಮೈಕ್ರೊಮ್ಯಾಕ್ಸ್ ಇನ್ 2 ಬಿ ಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಕ್ಯಾಮೆರಾ ವೈಶಿಷ್ಟ್ಯಗಳಲ್ಲಿ ನೈಟ್ ಮೋಡ್, ಹಿನ್ನೆಲೆ ಭಾವಚಿತ್ರ, ಸೌಂದರ್ಯ ಮೋಡ್, ಚಲನೆಯ ಫೋಟೋ, ಪ್ಲೇ ಮತ್ತು ವಿರಾಮ ವೀಡಿಯೊ ಶೂಟ್, ಮತ್ತು ಪೂರ್ಣ-ಎಚ್ಡಿ ಫ್ರಂಟ್ ಮತ್ತು ಬ್ಯಾಕ್ ರೆಕಾರ್ಡಿಂಗ್ ಸೇರಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೈಕ್ರೋಮ್ಯಾಕ್ಸ್ ಇನ್‌ 2 ಬಿ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 160 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್, 20 ಗಂಟೆಗಳ ವೆಬ್ ಬ್ರೌಸಿಂಗ್, 15 ಗಂಟೆಗಳ ವೀಡಿಯೊ ಸ್ಟ್ರೀಮಿಂಗ್ ಮತ್ತು 50 ಗಂಟೆಗಳ ಟಾಕ್ಟೈಮ್ ಅನ್ನು ನೀಡುತ್ತದೆ ಎಂದು ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ VoWiFi, ಡ್ಯುಯಲ್ VoLTE, Wi-Fi 802.11 ac, ಬ್ಲೂಟೂತ್ v5, ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೊಸ ಮೈಕ್ರೋಮ್ಯಾಕ್ಸ್ ಇನ್ 2 ಬಿ 4GB RAM + 64GB ಶೇಖರಣಾ ಆಯ್ಕೆಗೆ 7,999ರೂ ಬೆಲೆ ಮತ್ತು 6GB + 64GB ಸ್ಟೋರೇಜ್ ಮಾದರಿಗೆ 8,999.ರೂ ಬೆಲೆ ಹೊಂದಿದೆ. ಇದನ್ನು ಕಪ್ಪು, ನೀಲಿ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. Flipkart ಮತ್ತು Micromaxinfo.com ಮೂಲಕ ಫೋನ್ ಮಾರಾಟಕ್ಕೆ ಲಭ್ಯವಿರುತ್ತದೆ. ಇದರ ಮೊದಲ ಮಾರಾಟವು ಆಗಸ್ಟ್ 6 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ನಡೆಯಲಿದೆ.

Most Read Articles
Best Mobiles in India

Read more about:
English summary
Micromax In 2b features a 6.52-inch HD+ waterdrop-style notch display.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X