Just In
- 6 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 8 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 9 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 11 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ದೇಶಿ ಮಾರುಕಟ್ಟೆಯಲ್ಲಿ ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ ಬಿಡುಗಡೆ!
ಇತ್ತೀಚಿನ ದಿನಗಳಲ್ಲಿ ಸ್ವದೇಶಿ ಸ್ಮಾರ್ಟ್ಫೋನ್ ಬ್ರ್ಯಾಂಡ್ ಮೈಕ್ರೋಮ್ಯಾಕ್ಸ್ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಮೈಕ್ರೋಮ್ಯಾಕ್ಸ್ ಇನ್ ಸರಣಿಯ ಮೂಲಕ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್ಫೋನ್ ಕಳೆದ ವರ್ಷ ಭಾರತದಲ್ಲಿ ಲಾಂಚ್ ಆಗಿದ್ದ ಮೈಕ್ರೋಮ್ಯಾಕ್ಸ್ In 2b ಮಾದರಿಯನ್ನು ಹೋಲುತ್ತದೆ.

ಹೌದು, ಮೈಕ್ರೋಮ್ಯಾಕ್ಸ್ ಕಂಪೆನಿ ಭಾರತದಲ್ಲಿ ಹೊಸ ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ವಾಟರ್ಡ್ರಾಪ್ ಶೈಲಿಯ ಡಿಸ್ಪ್ಲೇ ನಾಚ್ನೊಂದಿಗೆ ಬರುತ್ತದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD+ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 263ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ಪ್ರತ್ಯೇಕ ಡೆಪ್ತ್ ಸೆನ್ಸಾರ್ನೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಫೇಸ್ ಬ್ಯೂಟಿ, ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್ ಫೀಚರ್ಸ್ಗಳನ್ನು ಬೆಂಬಲಿಸಲಿದೆ.

ಬ್ಯಾಟರಿ ಮತ್ತು ಇತರೆ
ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸಿಂಗಲ್ ಚಾರ್ಜ್ನಲ್ಲಿ 16 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅಥವಾ 50 ಗಂಟೆಗಳ ಟಾಕ್ ಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, USB ಟೈಪ್-C ಮತ್ತು 3.5mm ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೈಕ್ರೋಮ್ಯಾಕ್ಸ್ In 2c ಸ್ಮಾರ್ಟ್ಫೋನ್ ಏಕೈಕ 3GB RAM + 32GB ಸ್ಟೋರೇಜ್ ರೂಪಾಂತರಕ್ಕೆ 8,499ರೂ.ಬೆಲೆ ಹೊಂದಿದೆ. ಈ ಫೋನ್ ಲಾಂಚ್ ಆಫರ್ನಲ್ಲಿ ಆರಂಭದಲ್ಲಿ 7,499ರೂ.ಗಳಿಗೆ ಲಭ್ಯವಾಗಲಿದೆ. ಆದರೆ ಲಾಂಚ್ ಆಫರ್ ಬೆಲೆ ಎಷ್ಟು ಸಮಯದವರೆಗೆ ಇರುತ್ತದೆ ಎಂಬ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಇನ್ನು ಈ ಫೋನ್ ಬ್ರೌನ್ ಮತ್ತು ಸಿಲ್ವರ್ ಬಣ್ಣಗಳ ಆಯ್ಕಯಲ್ಲಿ ಬರಲಿದ್ದು, ಫ್ಲಿಪ್ಕಾರ್ಟ್ ಮತ್ತು ಮೈಕ್ರೋಮ್ಯಾಕ್ಸ್ ಅಧಿಕೃತ ಸೈಟ್ನಲ್ಲಿ ಮೇ 1 ರಿಂದ ಖರೀದಿಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086