ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!

|

ಮೈಕ್ರೋಮ್ಯಾಕ್ಸ್‌ ಮೊಬೈಲ್‌ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಮೈಕ್ರೋಮ್ಯಾಕ್ಸ್‌ ಇನ್‌ 1 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಆಗಿದೆ. ಈ ಫೋನ್ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಅಗ್ಗದ ಬೆಲೆಗೆ ಲಾಂಚ್ ಆಗಿ ಗಮನ ಸೆಳೆದಿತ್ತು. ಇದೀಗ ಫೋನಿನ ಬೆಲೆಯಲ್ಲಿ ಕಡಿತ ಆಗಿದ್ದು, ಮತ್ತಷ್ಟು ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಅನ್ನು ಹೊಂದಿದೆ.

ವೇರಿಯಂಟ್‌

ಹೌದು, ಮೈಕ್ರೋಮ್ಯಾಕ್ಸ್‌ನ ನೂತನ ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 1,500ರೂ.ಗಳ ಇಳಿಕೆ ಆಗಿದೆ. ಈ ಸ್ಮಾರ್ಟ್‌ಫೋನ್‌ 4GB RAM ಜೊತೆಗೆ 64GB ಮತ್ತು 128GB ಆಂತರಿಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಬೆಲೆ ಇಳಿಕೆ ನಂತರ ಈ ಫೋನಿನ ಆರಂಭಿಕ ಬೆಲೆಯು 9,499ರೂ.ಗಳು ಆಗಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ. ಈ ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ಮಾದರಿ ಪಡೆದಿದೆ. ಹಾಗೆಯೇ ಡಿಸ್‌ಪ್ಲೇ 20: 9 ರಚನೆಯ ಅನುಪಾತ, ಮತ್ತು 1.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್ 11 ಗೆ ಅಪ್‌ಗ್ರೇಡ್ ಆಯ್ಕೆ ನೀಡಿದೆ. ಹಾಗೆಯೇ 4GB RAM ಸಾಮರ್ಥ್ಯವನ್ನು ಹೊಂದಿದ್ದು, ಇದರೊಂದಿಗೆ 64GB ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4G, ಡ್ಯುಯಲ್-VOLTE, ಬ್ಲೂಟೂತ್ 5.0, GPS ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಆಫರ್ ಬೆಲೆ ಮತ್ತು ಲಭ್ಯತೆ

ಆಫರ್ ಬೆಲೆ ಮತ್ತು ಲಭ್ಯತೆ

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್‌ ಬೆಲೆಯು 9,499ರೂ. ಆಗಿದೆ. ಈ ಮೊದಲು ಇದರ ಬೆಲೆ ರೂ 10,999 ಆಗಿತ್ತು. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ ವೇಳೆ ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ ಅನ್ನು ಮಾರಾಟ ಮಾಡಲಿದೆ. ಅಕ್ಟೋಬರ್ 3 ಮತ್ತು ಅಕ್ಟೋಬರ್ 10 ರ ಸೇಲ್ ಅವಧಿಯ ನಡುವೆ ಗ್ರಾಹಕರು ಆಕ್ಸಿಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ, ಈ ಫೋನ್ ಖರೀದಿಸಿದರೇ ಶೇಕಡಾ 10 ರಷ್ಟು ರಿಯಾಯಿತಿ ಪಡೆಯಬಹುದು.

Best Mobiles in India

English summary
Micromax IN Note 1 Price in India Cut By Rs 1,500: Details Here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X