Home
ಸುದ್ದಿಜಾಲ

256GB ಸ್ಟೋರೇಜ್‌ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್‌ ಆಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ತಾಣವು ಎಲ್ಲ ಉತ್ಪನ್ನಗಳಿಗೂ ಕೊಡುಗೆ ಘೋಷಿಸಿರುತ್ತದೆ. ಮುಖ್ಯವಾಗಿ ಕೆಲವು ಆಯ್ದ ಮೊಬೈಲ್‌ಗಳಿಯೂ ಸಹ ಅಧಿಕ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಮುಂದೆ ಸಾಗಿದೆ. ಇದೀಗ ಪೊಕೊ X6 ನಿಯೋ 5G (POCO X6 Neo 5G) ಫೋನ್‌ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಖರೀದಿದಾರರು ಅಚ್ಚರಿಯಿಂದ ಈ ಫೋನಿನತ್ತ ತಿರುಗಿ ನೋಡುವಂತಾಗಿದೆ. ಅಂದಹಾಗೆ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮೊಟೊರೊಲಾ ಸಂಸ್ಥೆಯ ಪೊಕೊ X6 ನಿಯೋ 5G ಮೊಬೈಲ್ ಶೇ. 27% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 15,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ.

256GB ಸ್ಟೋರೇಜ್‌ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಸ್ಟೈಲಿಶ್‌ ಲುಕ್‌ನ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಹಾಗೆಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇನ್ನು ಈ ಫೋನ್‌ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಪೊಕೊ X6 ನಿಯೋ 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಪೊಕೊ X6 ನಿಯೋ - ಫೀಚರ್ಸ್‌

ಪೊಕೊ X6 ನಿಯೋ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಜೊತೆಗೆ ಇದರ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಇದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.

ಪೊಕೊ X6 ನಿಯೋ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಪವರ್‌ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.

ಪೊಕೊ X6 ನಿಯೋ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಪೊಕೊ X6 ನಿಯೋ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌ ನಂತಹ ಆಯ್ಕೆಗಳು ಇವೆ.

ಪೊಕೊ X6 ನಿಯೋ ಮೊಬೈಲ್‌ 8GB + 128GB ವೇರಿಯಂಟ್‌ ಹಾಗೂ 12GB + 256GB ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ ಇದೆ. ಇನ್ನು ಈ ಫೋನ್‌ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿ ಮಾಡಬಹುದಾಗಿದೆ.

Best Mobiles in India

English summary
Mind blowing discount on POCO X6 Neo 5G Mobile in India. check other Details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+