Home
ಸುದ್ದಿಜಾಲ

ಆನ್‌ಲೈನ್‌ ಮೂಲಕ ಫೋನ್‌ ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್‌!..ಇದು ಸಖತ್ ಆಫರ್‌!

ಅಮೆಜಾನ್‌ ಇ ಕಾಮರ್ಸ್‌ ಅನೇಕ ಆನ್‌ಲೈನ್‌ ಶಾಪಿಂಗ್‌ ಮಾಡುವ ಖರೀದಿದಾರರಿಗೆ ಒನ್‌ ಸ್ಟಾಪ್‌ ಅಡ್ಡಾ ಎನಿಸಿದೆ. ಈ ಪ್ಲಾಟ್‌ಫಾರ್ಮ್ ಮುಖ್ಯವಾಗಿ ಮೊಬೈಲ್‌ಗಳಿಗೆ ಏನಾದರೊಂದು ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡುತ್ತದೆ. ಇದೀಗ ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಡಿಸ್ಕೌಂಟ್‌ ಘೋಷಿಸಿದ್ದು, ಅಗ್ಗದ ಬೆಲೆಯಲ್ಲಿ ಫೋನ್‌ ಖರೀದಿಸಬೇಕು ಎನ್ನುವ ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಒಳಗೊಂಡಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಟೆಕ್ನೋ ಸ್ಪಾರ್ಕ್ 20C ಫೋನ್‌ ಶೇ. 24% ರಷ್ಟು ರಿಯಾಯಿತಿ ಹೊಂದಿದೆ. ಈ ಮೊಬೈಲ್‌ನ 16GB* + 128GB ಸ್ಟೋರೇಜ್‌ ವೇರಿಯಂಟ್‌ 7,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಆನ್‌ಲೈನ್‌ ಮೂಲಕ ಫೋನ್‌ ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್‌!..ಇದು ಸಖತ್ ಆಫರ್‌

ಇದು ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಅಲ್ಲದೇ ಈ ಫೋನ್‌ ಗ್ರ್ಯಾವಿಟಿ ಬ್ಲ್ಯಾಕ್, ಮ್ಯಾಜಿಕ್ ಸ್ಕೀನ್ ಗ್ರೀನ್ ಹಾಗೂ ಮೈಸ್ಟ್ರಿ ವೈಟ್ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್ 20C ಫೀಚರ್ಸ್‌

ಟೆಕ್ನೋ (Tecno) ಸ್ಪಾರ್ಕ್ 20C ಮೊಬೈಲ್‌ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇಯು 720 × 1612 ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ ಸೆಂಟರ್ಡ್ ಪಂಚ್ ಹೋಲ್ ನಾಚ್, ಮತ್ತು ಡೈನಾಮಿಕ್ ಪೋರ್ಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಈ ಫೋನ್‌ PowerVR GE8320 GPU ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 8GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದು PDAF ಮತ್ತು HDR AI ಲೆನ್ಸ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್ ಫ್ಲ್ಯಾಷ್‌ ಅನ್ನು ಸಹ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಹಾಗೂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ 8 GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ದೊರೆಯುತ್ತದೆ. ಇನ್ನು ಈ ಫೋನ್‌ ಗ್ರ್ಯಾವಿಟಿ ಬ್ಲ್ಯಾಕ್, ಮ್ಯಾಜಿಕ್ ಸ್ಕೀನ್ ಗ್ರೀನ್ ಹಾಗೂ ಮೈಸ್ಟ್ರಿ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ. ಇನ್ನು ಖರೀದಿದಾರರು ಅಮೆಜಾನ್ ತಾಣದಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Mind blowing Price Cut on TECNO Spark 20C on Amazon website. check other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+