ಈ ನೂತನ 5G ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ ನಿಮಗೆ ಇಷ್ಟವೇ?
ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಅನೇಕರು ಮೊಬೈಲ್ ಖರೀದಿಸಲು ಮುಂದಾಗುತ್ತಾರೆ. ಇನ್ನು ಅಮೆಜಾನ್ ತಾಣವು ಸಹ ಮೊಬೈಲ್‌ಗಳಿಗೆ ಏನಾದರೊಂದು ಆಫರ್ ಲಭ್ಯ ಮಾಡಿರುತ್ತದೆ. ಸದ್ಯ ಒಪ್ಪೋ ಸಂಸ್ಥೆಯ ಇತ್ತೀಚಿನ ಒಪ್ಪೋ A59 5G ಫೋನ್ ಭಾರೀ ಆಕರ್ಷಕ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಒಪ್ಪೋ A59 5G ಫೋನ್ ಮೊಬೈಲ್ ಇದೀಗ ಶೇಕಡಾ 22% ಪರ್ಸೆಂಟ್‌ನಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಮೊಬೈಲ್ ಅನ್ನು 4GB RAM + 128GB ವೇರಿಯಂಟ್ ಫೋನ್ ಅನ್ನು 14,000 ರೂ. ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು. ಹೆಚ್ಚುವರಿಯಾಗಿ ಅಮೆಜಾನ್‌ನಲ್ಲಿ ಬ್ಯಾಂಕ್ ಡಿಸ್ಕೌಂಟ್ ಸಹ ಗ್ರಾಹಕರಿಗೆ ಲಭ್ಯ ಸಿಗಲಿವೆ.

ಇನ್ನು ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, 13 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಒಪ್ಪೋ A59 5G ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒಪ್ಪೋ A59 5G - ಫೀಚರ್ಸ್ ಹೀಗಿವೆ
ಒಪ್ಪೋ A59 5G ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಡ್ಯೂಡ್ರಾಪ್ ನಾಚ್ ಅನ್ನು ಹೊಂದಿದ್ದು, 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಇದು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲ ಹಾಗೂ 720 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ನೀಡಲಿದೆ.

ಒಪ್ಪೋದ ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ-G57 MC2 GPU ಸಪೋರ್ಟ್ ಹೊಂದಿದೆ. ಹಾಗೆಯೇ ಇದು 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಒಪ್ಪೋ A59 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಬೊಕೆ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಒಪ್ಪೋ A59 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W SUPERVOOC ಫ್ಲ್ಯಾಷ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದರಿಂದ ಮೊಬೈಲ್ ಅನ್ನು ಕೇವಲ 30 ನಿಮಿಷಗಳಲ್ಲಿ 52% ಚಾರ್ಜ್ ಮಾಡಬಹುದು ಎಂದು ಸಂಸ್ಥೆಯು ಹೇಳಿದೆ. ಇದಲ್ಲದೆ ಫೋನ್ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೌಲಭ್ಯ ಸಹ ಪಡೆದಿದೆ.
ಒಪ್ಪೋ A59 5G ಮೊಬೈಲ್ ಭಾರತದಲ್ಲಿ 4GB RAM ಮತ್ತು 128GB ಸ್ಟೋರೇಜ್ ಹಾಗೂ 6GB+128GB RAM ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನ್ ಸಿಲ್ಕ್ ಗೋಲ್ಡ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಗ್ರಾಹಕರು ಅಮೆಜಾನ್ ತಾಣದ ಮೂಲಕ ಖರೀದಿಸಬಹುದು.


Click it and Unblock the Notifications








