ವಿವೋದ ಈ ಬಹುಬೇಡಿಕೆಯ ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!
ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಫೋನ್‌ಗಳಿಗೆ ಡಿಮ್ಯಾಂಡ್ ಇದೆ. ಸಂಸ್ಥೆಯು ವಿವೋ V ಸರಣಿಯ ಫೋನ್‌ಗಳು ಆಕರ್ಷಕ ಡಿಸೈನ್ ಹಾಗೂ ಫೀಚರ್ಸ್‌ನಿಂದ ಗ್ರಾಹಕರನ್ನು ಅಟ್ರ್ಯಾಕ್ಟ್ ಮಾಡಿವೆ. ಆ ಪೈಕಿ ವಿವೋ V29e 5G ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ V29e 5G ಮೊಬೈಲ್ ಶೇ. 21% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 26,815 ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ಡಿಸ್ಕೌಂಟ್ ಸಹ ಲಭ್ಯವಾಗಲಿದೆ.

ಇದು ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 695 SoC ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ V29e 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ V29e 5G ಫೀಚರ್ಸ್
ವಿವೋ V29e 5G ಸ್ಮಾರ್ಟ್‌ಫೋನ್ 6.73 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಸೆಲ್ಫಿ ಕ್ಯಾಮೆರಾ ಸೌಲಭ್ಯಕ್ಕಾಗಿ ಮುಂಭಾಗದಲ್ಲಿ ಪಂಚ್ ಹೋಲ್ ಕಟೌಟ್ ಒದಗಿಸಲಾಗಿದ್ದು, ಇದು ಡಿಸ್‌ಪ್ಲೇ ಆಕರ್ಷಕ ಎನಿಸುತ್ತದೆ.
ವಿವೋ V29e 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್ ಸಪೋರ್ಟ್ ಪಡೆದಿದೆ. ಇದರ ಜೊತೆಗೆ 128 GB ಹಾಗೂ 256 GB ಆಂತರೀಕ ಸ್ಟೋರೇಜ್ ಆಯ್ಕೆಯ ಜೊತೆಗೆ 8GB RAM ಸಪೋರ್ಟ್ ಪಡೆದಿದೆ.
ವಿವೋ V29e 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ OIS ಸೌಲಭ್ಯ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಹೊಂದಿದೆ.
ಇನ್ನು ಸೆಲ್ಫಿಗಾಗಿ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಪೋರ್ಟ್ರೇಟ್, ಮೈಕ್ರೋ ಮೂವಿ, ಹೈ-ರೆಸಲ್ಯೂಶನ್, ಪ್ಯಾನೋ, ಸ್ಲೋ ಮೋಷನ್, ಡಬಲ್ ಎಕ್ಸ್‌ಪೋಸರ್, ಡ್ಯುಯಲ್ ವ್ಯೂ, ಸೂಪರ್‌ಮೂನ್ ಮತ್ತು ಲೈಟ್ ಎಫೆಕ್ಟ್ ಆಯ್ಕೆ ಕಾಣಬಹುದು.
ವಿವೋ V29e 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಅದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಹಾಗೆಯೇ ಇದು 5G, ಟೈಪ್ ಟಿ ಚಾರ್ಜಿಂಗ್ ಪೋರ್ಟ್, ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ, ಅಗತ್ಯ ಕನೆಕ್ಟಿವಿಟಿ ಆಯ್ಕೆಗಳನ್ನು ಪಡೆದಿದೆ.
ವಿವೋ V29e 5G ಸ್ಮಾರ್ಟ್‌ಫೋನ್ 8GB RAM ಜೊತೆಗೆ 128GB ಮತ್ತು 256GB ಆಂತರೀಕ ಸ್ಟೋರೇಜ್ ಮಾಡೆಲ್‌ಗಳನ್ನು ಹೊಂದಿದೆ. ಇನ್ನು ಈ ಮೊಬೈಲ್ ರೆಡ್ ಅಥವಾ ಬ್ಲೂ ಬಣ್ಣದಲ್ಲಿ ಈ ಫೋನ್‌ಗಳಿದ್ದು, ಆರ್ಟಿಸ್ಟಿಕ್ ರೆಡ್ ಆಯ್ಕೆ ಪಡೆದಿದೆ.


Click it and Unblock the Notifications








