Home
ಸುದ್ದಿಜಾಲ

ಭಾರತದಲ್ಲಿ 30,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ದಿನೇ ದಿನೇ 5G ಸ್ಮಾರ್ಟ್‌ಫೋನ್‌ ಅಬ್ಬರ ಜೋರಾಗಿದೆ. ಭಾರತದಲ್ಲಿ 5G ನೆಟ್‌ವರ್ಕ್‌ ಇನ್ನು ಲಭ್ಯವಿಲ್ಲವಾದರೂ ಭವಿಷ್ಯದ ದೃಷ್ಟಿಯಿಂದ 5G ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಪ್ರಸ್ತುತ ಭಾರತದಲ್ಲಿ ಬಳಕೆದಾರರ ಕೈನಲ್ಲಿ ಹಲವು ಬ್ರಾಂಡ್‌ಗಳ 5G ಸ್ಮಾರ್ಟ್‌ಫೋನ್‌ಗಳು ರಾರಾಜಿಸುತ್ತಿವೆ. ಇದರಲ್ಲಿ ಶಿಯೋಮಿ, ಒನ್‌ಪ್ಲಸ್‌, ಒಪ್ಪೋ, ರಿಯಲ್‌ಮಿ ಸಂಸ್ಥೆಗಳು ಈಗಾಗಲೇ ಹಲವು 5G ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ವಲಯದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನ ಸೆಳೆಯುತ್ತಿದೆ. ಹೆಚ್ಚಿನ ದಕ್ಷತೆಯ ಪ್ರೊಸೆಸರ್‌, ಅಧಿಕ ಬ್ಯಾಟರಿ ಸಾಮರ್ಥ್ಯ, ಹೊಸ ಮಾದರಿಯ ಫೀಚರ್ಸ್‌ ಒಳಗೊಂಡ 5G ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತಿವೆ. ಇನ್ನು ಸ್ಮಾರ್ಟ್‌ಫೋನ್‌ ಪ್ರಿಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳ ಖರೀದಿಗೆ ಆಸಕ್ತಿ ವಹಿಸುತ್ತಿದ್ದಾರೆ. ನೀವು ಕೂಡ 5G ಸ್ಮಾರ್ಟ್‌ಫೋನ್‌ ಖರೀದಿಸಬೇಕಾ? ಹಾಗಾದ್ರೆ ಮಾರುಕಟ್ಟೆಯಲ್ಲಿ 30,000ರೂ. ಬೆಲೆಯಲ್ಲಿ ಲಭ್ಯವಾಗುವ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ ನಾರ್ಡ್ 2 5G

ಒನ್‌ಪ್ಲಸ್ ನಾರ್ಡ್ 2 5G

ಮಾರುಕಟ್ಟೆಯಲ್ಲಿ ಲಭ್ಯವಿರುವ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್‌ ನಾರ್ಡ್‌ 2 5G ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಯ ​​6GB RAM + 128GB ಸ್ಟೋರೇಜ್ ರೂಪಾಂತರವು ಭಾರತದಲ್ಲಿ 27,999,ರೂ ಬೆಲೆ ಹೊಂದಿದೆ.

ಶಿಯೋಮಿ ಮಿ11X 5G ಸ್ಮಾರ್ಟ್‌ಫೋನ್‌

ಶಿಯೋಮಿ ಮಿ11X 5G ಸ್ಮಾರ್ಟ್‌ಫೋನ್‌

ಶಿಯೋಮಿ ಮಿ11X 5G ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿವೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB+128GB ಆಯ್ಕೆಗೆ 27,999ರೂ, ಮತ್ತು 8GB+128GB ಸ್ಟೋರೇಜ್‌ ಆಯ್ಕೆಗೆ 28,999.ರೂ ಬೆಲೆ ಹೊಂದಿದೆ.

ಒಪ್ಪೋ ರೆನೊ 6 5G

ಒಪ್ಪೋ ರೆನೊ 6 5G

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,300mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಪ್ರಸ್ತುತ ಇದರ ಬೆಲೆ ರೂ 29,990.ಆಗಿದೆ.

ರಿಯಲ್‌ಮಿ X7 ಮ್ಯಾಕ್ಸ್ 5G

ರಿಯಲ್‌ಮಿ X7 ಮ್ಯಾಕ್ಸ್ 5G

ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ವೆರಿಯಂಟ್‌ಗಳಲ್ಲಿ ಲಭ್ಯವಿದೆ. ಇದರಲ್ಲಿ 8GB + 128GB ಸ್ಟೋರೇಜ್‌ ಆಯ್ಕೆ 26,999 ರೂ. ಹಾಗೂ 12GB + 256GB ಸ್ಟೋರೇಜ್ ಮಾಡೆಲ್ 29,999ರೂ.ಬೆಲೆಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್ HD + AMOLED ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ರೆಡ್ಮಿ ನೋಟ್ 10T 5G

ರೆಡ್ಮಿ ನೋಟ್ 10T 5G

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 14,999ರೂ.ಬೆಲೆ ಹೊಂದಿದೆ. ಹಾಗೆಯೇ 6GB RAM + 128GB ಗೆ 16,999.ರೂ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ.

Best Mobiles in India

English summary
Most affordable top-five 5G smartphones to buy in India under Rs. 30,000.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+