Home
ಸುದ್ದಿಜಾಲ

ಸದ್ಯದಲ್ಲೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿವೆ ಈ ಸ್ಮಾರ್ಟ್‌ಫೋನ್‌ಗಳು! ಯಾಕಿಷ್ಟು ನಿರೀಕ್ಷೆ?

ಮೊಬೈಲ್‌ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿಯೇ ಇದೆ. ಎಂದಿನಂತೆ ಸೆಪ್ಟೆಂಬರ್‌ ತಿಂಗಳಿನಲ್ಲಿಯೂ ಹಲವು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿ ಅಬ್ಬರಿಸಿವೆ. ಇದೀಗ ಆಕ್ಟೋಬರ್‌ ತಿಂಗಳಿನಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲು ತಯಾರಿ ನಡೆಸಿವೆ. ಈ ಸ್ಮಾರ್ಟ್‌ಫೋನ್‌ಗಳಲ್ಲಿ ಕೆಲವು ಬ್ರ್ಯಾಂಡ್‌ಗಳು ಭಾರಿ ಸಂಚಲನ ಸೃಷ್ಟಿಸಿವೆ.

ಹೌದು, ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಈ ತಿಂಗಳು ಹಲವು ಆಯ್ಕೆಗಳು ಲಭ್ಯವಾಗಲಿವೆ. ಅದರಲ್ಲೂ ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಇದೇ ತಿಂಗಳು ಮಾರುಕಟ್ಟೆಗೆ ಅಪ್ಪಳಿಸಲಿವೆ. ಇವುಗಳಲ್ಲಿ ಈಗಾಗಲೇ ಕೆಲವು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಬಹಿರಂಗವಾಗಿದ್ದು, ಟೆಕ್‌ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಕ್ರಿಯೆಟ್‌ ಮಾಡಿವೆ. ಹಾಗಾದ್ರೆ ಈ ತಿಂಗಳು ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿವೆ ಈ ಸ್ಮಾರ್ಟ್‌ಫೋನ್‌ಗಳು!

ಗೂಗಲ್‌ ಪಿಕ್ಸೆಲ್‌ 8 ಸರಣಿ
ಆಕ್ಟೋಬರ್‌ ತಿಂಗಳಿನಲ್ಲಿ ಮಾರುಕಟ್ಟೆಗೆ ಬರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ ಪಿಕ್ಸೆಲ್‌ 8 ಸರಣಿ ಕೂಡ ಒಂದಾಗಿದೆ. ಇದು ಅಕ್ಟೋಬರ್ 4 ರಂದು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಈ ಸರಣಿಯಲ್ಲಿ ಗೂಗಲ್‌ ಪಿಕ್ಸೆಲ್‌ 8 ಮತ್ತು ಗೂಗಲ್‌ ಪಿಕ್ಸೆಲ್‌ 8 ಪ್ರೊ ಸ್ಮಾರ್ಟ್‌ಫೋನ್‌ ಬರುವ ನಿರೀಕ್ಷೆಯಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕೂಡ ಟೆನ್ಸರ್ G3 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ಗಳು ಹೊಸ AI-ಚಾಲಿತ ಸಾಫ್ಟ್‌ವೇರ್ ಸಾಮರ್ಥ್ಯಗಳನ್ನು ಒಳಗೊಂಡಿರುತ್ತವೆ ಎಂದು ವರದಿಯಾಗಿದೆ.

ಒನ್‌ಪ್ಲಸ್‌ ಓಪನ್
ಒನ್‌ಪ್ಲಸ್‌ ಕಂಪೆನಿ ಇದೇ ತಿಂಗಳು ತನ್ ಮೊದಲ ಫೋಲ್ಡಬಲ್ ಫೋನ್ ಒನ್‌ಪ್ಲಸ್‌ ಓಪನ್ ಅನ್ನು ಬಿಡುಗಡೆ ಮಾಡಲಿದೆ. ಇದು ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ಓಪನ್ ಪೆರಿಸ್ಕೋಪ್ ಜೂಮ್ ಲೆನ್ಸ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಒನ್‌ಪ್ಲಸ್‌ 11R (ರೆಡ್‌)
ಒನ್‌ಪ್ಲಸ್‌ 7 ರೆಡ್‌ ಬಣ್ಣದ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ 18 GB RAM ಮತ್ತು 512 GB ವರೆಗೆ ಆಂತರಿಕ ಸಂಗ್ರಹಣೆಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇದು ಹಿಂಭಾಗದಲ್ಲಿ ವೃತ್ತಾಕಾರದ ಕ್ಯಾಮೆರಾ ಸೆಟಪ್ ಜೊತೆಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8+ Gen 1 SoC ನಿಂದ ಚಾಲಿತವಾಗಲಿದೆ. ಇದು ಆಂಡ್ರಾಯ್ಡ್ 13-ಆಧಾರಿತ OxygenOS 13 ಸ್ಕಿನ್‌ನೊಂದಿಗೆ ರನ್‌ ಆಗಲಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್‌ ಕೂಡ ಆಕ್ಟೋಬರ್‌ನಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದು ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಫೋನ್‌ 6.5 ಇಂಚಿನ ಕಂಪ್ಯಾಕ್ಟ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿಭಾಗವೂ ಅತ್ಯಾಕರ್ಷಕವಾಗಿರಲಿದೆ ಎಂದು ನಿರೀಕ್ಷೆ ಇಡಲಾಗಿದೆ.

ವಿವೋ V29 ಸರಣಿ
ವಿವೋ V29 ಸರಣಿ ಸ್ಮಾರ್ಟ್‌ಫೋನ್‌ಗಳು ಕೂಡ ಅಕ್ಟೋಬರ್ 4 ರಂದು ಎಂಟ್ರಿ ನೀಡುವ ನಿರೀಕ್ಷೆಯಿದೆ. ಅಧಿಕೃತ ವೆಬ್‌ಸೈಟ್ ಪ್ರಕಾರ, V29 ಸರಣಿಯು ಬಾಗಿದ ಡಿಸ್ಪ್ಲೇಯನ್ನು ಹೊಂದಿರುತ್ತದೆ. ಅಲ್ಲದೆ 2x ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ಗಳು ಮೆಜೆಸ್ಟಿಕ್ ರೆಡ್ ಸೇರಿದಂತೆ ವಿವಿಧ ಬಣ್ಣದ ರೂಪಾಂತರಗಳಲ್ಲಿ ಬರಲಿವೆ.

Best Mobiles in India

English summary
Most anticipated phones launching This month in india: Complete details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+