ಸೆಪ್ಟೆಂಬರ್‌ ತಿಂಗಳಿನಲ್ಲಿ ಲಾಂಚ್‌ ಆಗುವ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಹೊಸದೇನು ಅಲ್ಲ. ಹಲವು ಪ್ರತಿಷ್ಠಿತ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ತಮ್ಮ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಎಂದಿನಂತೆ ಸೆಪ್ಟೆಂಬರ್‌ ತಿಂಗಳಿನಲ್ಲಿಯೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಇದರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಐಫೋನ್‌ 14 ಸರಣಿ ಲಾಂಚ್‌ ಈವೆಂಟ್‌ ಕೂಡ ಸೇರಿದೆ. ಇದರೊಂದಿಗೆ ರೆಡ್ಮಿ, ಪೊಕೊ ಬ್ರ್ಯಾಂಡ್‌ಗಳ ಹೊಸ ಸ್ಮಾರ್ಟ್‌ಫೋನ್‌ಗಳು ಕೂಡ ಇದೇ ತಿಂಗಳು ಎಂಟ್ರಿ ನೀಡಲಿವೆ.

ಸೆಪ್ಟೆಂಬರ್‌

ಹೌದು, ಸೆಪ್ಟೆಂಬರ್‌ ತಿಂಗಳಲ್ಲಿ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಕುತೂಹಲವನ್ನು ಮೂಡಿಸಿವೆ. ಐಫೋನ್‌ 14 ಸರಣಿ ಸೇರಿದಂತೆ ಅನೇಕ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಸ್ಮಾರ್ಟ್‌ಫೋನ್‌ ಪ್ರಿಯರು ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಇದರಿಂದ ಈ ತಿಂಗಳು ಟೆಕ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಗಳು ಸೃಷ್ಟಿಯಾಗುವ ಸಾದ್ಯತೆಯಿದೆ. ಹಾಗಾದ್ರೆ ಸೆಪ್ಟೆಂಬರ್‌ ತಿಂಗಳಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಫೋನ್ 14 ಸರಣಿ

ಐಫೋನ್ 14 ಸರಣಿ

ಸೆಪ್ಟೆಂಬರ್‌ ತಿಂಗಳಿನಲ್ಲಿ ಬಹು ನಿರೀಕ್ಷಿತ ಐಫೋನ್ 14 ಸರಣಿ ಬಿಡುಗಡೆಯಾಗಲಿದೆ. ಇದರಲ್ಲಿ ಐಫೋನ್‌ 14 ಮ್ಯಾಕ್ಸ್‌, ಐಫೋನ್‌ 14, ಐಫೋನ್‌ 14 ಪ್ರೊ ಮತ್ತು ಐಫೋನ್‌ 14 ಪ್ರೊ ಮ್ಯಾಕ್ಸ್‌ ಎಂಬ ನಾಲ್ಕು ಮಾದರಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ. ಐಫೋನ್ 14 ಮತ್ತು ಐಫೋನ್ 14 ಮ್ಯಾಕ್ಸ್ ಮಾದರಿಗಳು ಮುಂಭಾಗದಲ್ಲಿ ವಿಶಾಲವಾದ ವಿನ್ಯಾಸವನ್ನು ಹೊಂದುವ ನಿರೀಕ್ಷೆಯಿದೆ. ಇನ್ನು ಸಾಮಾನ್ಯ ಮಾದರಿಯು 6.1-ಇಂಚಿನ OLED ಡಿಸ್ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಆದರೆ ಐಫೋನ್ 14 ಪ್ರೊ ಮಾದರಿಗಳು 120Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.7-ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಪೊಕೊ M5

ಪೊಕೊ M5

ಪೊಕೊ M5 ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಲೀಕ್‌ ಆಗಿದ್ದು, ಇದು ಮೀಡಿಯಾ ಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇನ್ನು ಈ ಡಿವೈಸ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ ಎಂದು ಹೇಳಲಾಗಿದೆ. ಜೊತೆಗೆ ಇದು 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 10,000ರೂ. ಗಳಿಂದ 13,000ರೂ. ಒಳಗೆ ಇರಲಿದೆ ಎಂದು ಹೇಳಲಾಗಿದೆ.

ರೆಡ್ಮಿ 11 ಪ್ರೈಮ್

ರೆಡ್ಮಿ 11 ಪ್ರೈಮ್

ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಸೆಪ್ಟೆಂಬರ್ 6 ರಂದು ಬಿಡುಗಡೆ ಆಗೋದು ಪಕ್ಕಾ ಆಗಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ 5G ಸ್ಮಾರ್ಟ್‌ಫೋನ್ ಆಗಿರುವುದರಿಂದ ಸಾಕಷ್ಟು ನಿರೀಕ್ಷೆ ಹುಟ್ಟುಹಾಖಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ನಾಚ್ಡ್ ಡಿಸ್‌ಪ್ಲೇಯನ್ನು ಹೊಂದಿರುತ್ತದೆ ಎಂದು ರೆಡ್‌ಮಿ ಟೀಸರ್‌ನಲ್ಲಿ ಹೇಳಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ ಎನ್ನಲಾಗಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಐಕ್ಯೂ Z6 ಲೈಟ್‌

ಐಕ್ಯೂ Z6 ಲೈಟ್‌

ಐಕ್ಯೂ Z6 ಲೈಟ್‌ ಸ್ಮಾರ್ಟ್‌ಫೋನ್‌ ಕೂಡ ಇದೇ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಬೆಂಬಲಿಸುವ 6.58 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಸ್ನಾಪ್‌ಡ್ರಾಗನ್ 778 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ 13-ಮೆಗಾಪಿಕ್ಸೆಲ್ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಜೊತೆಗೆ 18W ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆ ಎಷ್ಟಿರಲಿದೆ ಎನ್ನುವ ವಿವರಗಳು ಇನ್ನು ಬಹಿರಂಗವಾಗಿಲ್ಲ.

Best Mobiles in India

Read more about:
English summary
Most Expected Smartphones launching in India in September 2022

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X