ಶೀಘ್ರದಲ್ಲೇ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ನಿಮಗೆಷ್ಟು ತಿಳಿದಿದೆ!
ಮೊಬೈಲ್ ಮಾರುಕಟ್ಟೆಯಲ್ಲಿ ವಿವಿಧ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ರಾರಾಜಿಸುತ್ತಿವೆ. ಮುಂದಿನ ತಿಂಗಳು ಕೂಡ ಹಲವು ಜನಪ್ರಿಯ ಬ್ರ್ಯಾಂಡ್‌ಗಳು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಅತ್ಯಾಕರ್ಷಕ ಫೀಚರ್ಸ್‌ಗಳೊಂದಿಗೆ ಬರುವ ನಿರೀಕ್ಷೆಯಿದೆ.
ಹೌದು, ಆಕ್ಟೋಬರ್ ತಿಂಗಳಿನಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಎಂಟ್ರಿಗೆ ವೇದಿಕೆ ಸಿದ್ದವಾಗಿದೆ. ಇದಕ್ಕೆ ತಕ್ಕಂತೆ ಈಗಾಗಲೇ ಆನ್‌ಲೈನ್‌ನಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಬಹಿರಂಗವಾಗಿದೆ. ಅದರಲ್ಲೂ ಪ್ರಸಿದ್ಧ ಬ್ರ್ಯಾಂಡ್‌ಗಳಾಗಿರುವ ಸ್ಯಾಮ್‌ಸಂಗ್, ವಿವೋ, ಗೂಗಲ್ ಸ್ಮಾರ್ಟ್‌ಫೋನ್‌ಗಳು ಕೂಡ ಎಂಟ್ರಿ ನೀಡಲಿವೆ ಎನ್ನಲಾಗಿದೆ. ಹಾಗಾದ್ರೆ ಮುಂದಿನ ತಿಂಗಳಿನಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ V29 ಸರಣಿ
ವಿವೋ V29 ಸರಣಿಯು ಭಾರತಕ್ಕೆ ಎಂಟ್ರಿ ನಿಡೋಕೆ ಭರ್ಜರಿ ತಯಾರಿ ನಡೆಸಿದೆ. ಅದರಂತೆ ವಿವೋ V29 ಸರಣಿಯು ಮುಂದಿನ ತಿಂಗಳು ಅಂದರೆ ಅಕ್ಟೋಬರ್ 4 ರಂದು ಬಿಡುಗಡೆ ಆಗೋದು ಪಕ್ಕಾ ಆಗಿದೆ. ಇನ್ನು ಈ ಸರಣಿಯಲ್ಲಿ ವಿವೋ V29 ಮತ್ತು ವಿವೋ V29ಪ್ರೊ ಸ್ಮಾರ್ಟ್‌ಫೋನ್‌ಗಳು ಬರೋದು ಕನ್ಫರ್ಮ್ ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಆಟೋಫೋಕಸ್‌ನೊಂದಿಗೆ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.
ಇದರಲ್ಲಿ ವಿವೋ V29 ಪ್ರೋ ಮಾದರಿಯು 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಪ್ರೈಮೆರಿ ಕ್ಯಾಮೆರಾದೊಂದಿಗೆ ಬರಲಿದೆ. ಇದು 80W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲಿಸಲಿದ್ದು, 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ.
ಗೂಗಲ್ ಪಿಕ್ಸೆಲ್ 8 ಸರಣಿ
ಗೂಗಲ್ ಪಿಕ್ಸೆಲ್ 8 ಯು ಕೂಡ ಇದೇ ಅಕ್ಟೋಬರ್ 4 ರಂದು ಅಧಿಕೃತವಾಗಿ ಎಂಟ್ರಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದು ನ್ಯೂಯಾರ್ಕ್‌ನಲ್ಲಿ ನಡೆಯುವ ಈವೆಂಟ್‌ನಲ್ಲಿ ಅನಾವರಣಗೊಳ್ಳುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಗೂಗಲ್ ಪಿಕ್ಸೆಲ್ 8 ಮತ್ತು ಗೂಗಲ್ ಪಿಕ್ಸೆಲ್ 8 ಪ್ರೊ ಮಾಡೆಲ್‌ಗಳು ಬರಲಿವೆ. ಈ ಸ್ಮಾರ್ಟ್‌ಫೋನ್‌ಗಳು ಟೆನ್ಸರ್ ಜಿ3 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಹೇಳಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ಗಳು 7 ವರ್ಷಗಳವರಗೆ ಸಾಫ್ಟ್‌ವೇರ್ ಅಪ್ಡೇಟ್‌ಗಳನ್ನು ಸ್ವೀಕರಿಸುತ್ತವೆ ಎನ್ನಲಾಗಿದೆ.
ಇನ್ನು ಈ ಸರಣಿಯಲ್ಲಿ ಬರುವ ಗೂಗಲ್ ಪಿಕ್ಸೆಲ್ 8 ಪ್ರೊ ರೂಪಾಂತರದ ರಿಯರ್ ಕ್ಯಾಮೆರಾದಲ್ಲಿ 48 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಪ್ರೈಮೆರಿ ಕ್ಯಾಮೆರಾ ಹಾಗೂ 48MP 5x ಪೆರಿಸ್ಕೋಪ್ ಜೂಮ್ ಯೂನಿಟ್ ಕೂಡ ಅಳವಡಿಸಲಾಗಿದೆ ಎಂದು ವರದಿಯಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಸಹ ಮುಂದಿನ ತಿಂಗಳು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 ಚಿಪ್‌ಸೆಟ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಹೊಂದಿರಲಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ ಎಂದು ವರದಿಯಾಗಿದೆ.


Click it and Unblock the Notifications








