ಜಿಯೋ, ಏರ್‌ಟೆಲ್, ವೊಡಾಫೋನಿನ ಈ ದುಬಾರಿ ಪ್ಲ್ಯಾನ್‌ಗಳ ಬಗ್ಗೆ ತಿಳಿದಿದೆಯೇ?
ಕೆಲವು ವರ್ಷಗಳಿಂದಿಚೆಗೆ ಭಾರತದಲ್ಲಿ ಡೇಟಾ ಬಳಕೆ ಪ್ರಮಾಣ ಹೆಚ್ಚಾಗಿದೆ. ಡೇಟಾ ಬಳಕೆ ಅಧಿಕವಾಗಲು ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್ ಟೆಲಿಕಾಂಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಸೌಲಭ್ಯ ಒದಗಿಸುತ್ತಿರುವುದು ಕಾರಣ ಎನ್ನಬಹುದಾಗಿದೆ. ಇಂದಿನ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಎಸ್‌ಎಮ್‌ಎಸ್, ವಾಯಿಸ್ ಕರೆ ಸೌಲಭ್ಯಗಳನ್ನು ಪಡೆದಿವೆ.

ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳಿ ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಒದಗಿಸಿವೆ. ಅವುಗಳು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ದುಬಾರಿ ಬೆಲೆಯ ರೇಂಜ್ ಅನ್ನು ಪಡೆದಿವೆ. ಪ್ರತಿದಿನ 1GB, 2GB ಮತ್ತು 3GB ಡೇಟಾ ಪ್ರಯೋಜನ ಒದಗಿಸುವ ಪ್ಲ್ಯಾನ್‌ಗಳ ಆಯ್ಕೆಗಳನ್ನು ಸಹ ಹೊಂದಿವೆ. ಹಾಗೆಯೇ ಸಾವಿರ ರೂಪಾಯಿಗೂ ಅಧಿಕ ಬೆಲೆಯ ಪ್ಲ್ಯಾನ್‌ಗಳನ್ನು ಪಡೆದಿವೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಅತ್ಯಂತ ದುಬಾರಿ ಪ್ರಿಪೇಯ್ಡ್ ಯೋಜನೆಗಳನ್ನು ಮುಂದೆ ನೋಡೋಣ.

ಜಿಯೋ 4999ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನ್ ದೊಡ್ಡ ಮೊತ್ತದ ಪ್ಲ್ಯಾನ್ ಆಗಿದ್ದು, ಒಟ್ಟು 360 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 350GB ಡೇಟಾ ಸೌಲಭ್ಯ ಇರುತ್ತದೆ. ಹಾಗೆಯೇ ಜಿಯೋ ಟು ಜಿಯೋ ಕರೆಗಳು ಉಚಿತವಾಗಿರುತ್ತವೆ ಹಾಗೂ ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಮಿತಿ ಇರುತ್ತದೆ. ಉಳಿದಂತೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳು ಲಭ್ಯವಾಗುತ್ತವೆ.

ಜಿಯೋ 2,399ರೂ.ಪ್ಲಾನ್
ಜಿಯೋದ 2,399ರೂ. ವಾರ್ಷಿಕ ಪ್ಲಾನ್, ಹಿಂದಿನ 2121ರೂ. ಪ್ಲ್ಯಾನ್‌ಗಿಂತ ಹೆಚ್ಚಿನ ಪ್ರಯೋಜನ ಪಡೆದಿದೆ. ಈ ಪ್ಲ್ಯಾನ್ 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಅನಿಯಮಿತ ಎಸ್‌ಎಮ್‌ಎಸ್, ವಾಯಿಸ್ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂಗಳಿಗೂ ಹೋಲಿಸಿದರೂ ಇದು ಉತ್ತಮ ವಾರ್ಷಿಕ ಯೋಜನೆ ಅನಿಸಲಿದೆ.

ಏರ್‌ಟೆಲ್ 2498ರೂ. ಪ್ಲ್ಯಾನ್
ಏರ್‌ಟೆಲ್‌ನ 2498ರೂ. ಪ್ರೀಪೇಡ್ ಪ್ಲ್ಯಾನ್ ವಾರ್ಷಿಕ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಹಾಗೂ ZEE5 ಪ್ರೀಮಿಯಂ ಸದಸ್ಯತ್ವ ಲಭ್ಯವಾಗಲಿದೆ.

ವೊಡಾಫೋನ್ 2399ರೂ.ಪ್ಲ್ಯಾನ್
ವೊಡಾಫೋನಿನ 2399ರೂ.ಪ್ಲ್ಯಾನ್ ಒಂದು ವಾರ್ಷಿಕ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಹಾಗೂ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








