ಜಿಯೋದ ಈ ಪ್ಲ್ಯಾನ್‌ ಸಖತ್‌ ಆಗಿದೆ!..ರೀಚಾರ್ಜ್‌ ಮಾಡಬೇಕಾ?.ಬೇಡವೇ?

|

ರಿಲಯನ್ಸ್‌ ಜಿಯೋ ಟೆಲಿಕಾಂ ಬಜೆಟ್‌ ಬೆಲೆಯ ಪ್ಲ್ಯಾನ್‌ಗಳೊಂದಿಗೆ ದುಬಾರಿ ದರದ ಪ್ಲ್ಯಾನ್‌ಗಳ ಆಯ್ಕೆಯನ್ನು ಚಂದಾದಾರರಿಗೆ ಲಭ್ಯ ಮಾಡಿದೆ. ದುಬಾರಿ ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಜೊತೆಗೆ ಅಧಿಕ ಡೇಟಾ ಪ್ರಯೋಜನ ಪಡೆದಿವೆ. ಸಾಮಾನ್ಯವಾಗಿ ಅನೇಕರು ದುಬಾರಿ ಬೆಲೆಯ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಇಷ್ಟಪಡುವುದಿಲ್ಲ. ಆದರೆ ಅವುಗಳ ಪ್ರಯೋಜನ ತಿಳಿದ್ರೆ, ಸೂಪರ್‌ ಅಂತಾ ಹೇಳುತ್ತಾರೆ.

ಜಿಯೋದ ಈ ಪ್ಲ್ಯಾನ್‌ ಸಖತ್‌ ಆಗಿದೆ!..ರೀಚಾರ್ಜ್‌ ಮಾಡಬೇಕಾ?.ಬೇಡವೇ?

ಹೌದು, ಜಿಯೋ ಟೆಲಿಕಾಂನ 2,999ರೂ, ಪ್ಲ್ಯಾನ್, 2879ರೂ. ಪ್ಲ್ಯಾನ್, 2545ರೂ. ಪ್ಲ್ಯಾನ್ ಮತ್ತು 2023ರೂ. ಪ್ಲ್ಯಾನ್‌ಗಳು ದುಬಾರಿ ಪ್ರೈಸ್‌ ಟ್ಯಾಗ್‌ ಅನ್ನು ಹೊಂದಿದ್ದರೂ, ಅತ್ಯುತ್ತಮ ಪ್ರಯೋಜನಗಳನ್ನು ಪಡೆದಿವೆ. ಈ ಯೋಜನೆಗಳು ಅಧಿಕ ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ದೀರ್ಘಾವಧಿಯ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಈ ದುಬಾರಿ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ? ಹಾಗೂ ಇತರೆ ಜನಪ್ರಿಯ ಜಿಯೋ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಜಿಯೋ ಆಪ್ಸ್‌ ಲಭ್ಯವಾಗುತ್ತವೆ.

ಜಿಯೋದ ಈ ಪ್ಲ್ಯಾನ್‌ ಸಖತ್‌ ಆಗಿದೆ!..ರೀಚಾರ್ಜ್‌ ಮಾಡಬೇಕಾ?.ಬೇಡವೇ?

ಜಿಯೋದ ಟೆಲಿಕಾಂ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಟೆಲಿಕಾಂ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ 504 GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ ಪ್ಲ್ಯಾನ್‌ ಸಖತ್‌ ಆಗಿದೆ!..ರೀಚಾರ್ಜ್‌ ಮಾಡಬೇಕಾ?.ಬೇಡವೇ?

ಜಿಯೋ ಟೆಲಿಕಾಂ 2023ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸ ವರ್ಷದ ಅಂಗವಾಗಿ ಪರಿಚಯಿಸಿರುವ 2023ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 252 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 630GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

Best Mobiles in India

English summary
This Jio prepaid recharge offers best data, validity, voice call benefits. but prices costly. more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X