Home
ಸುದ್ದಿಜಾಲ

ಇಂದಿನಿಂದ ಈ ಸ್ಮಾರ್ಟ್‌ಫೋನ್‌ ಅನ್ನು ಕೇವಲ 6,999 ರೂ.ಗಳಿಗೆ ಖರೀದಿಸಬಹುದು!

ಕೆಲದಿನಗಳ ಹಿಂದೆ ಭಾರತಕ್ಕೆ ಎಂಟ್ರಿ ನೀಡಿದ್ದ ಮೊಟೊ E13 ಸ್ಮಾರ್ಟ್‌ಫೋನ್‌ ಇಂದಿನಿಂದ (ಫೆ.15) ಖರೀದಿಗೆ ಲಭ್ಯವಾಗಲಿದೆ. ಬಜೆಟ್‌ ಬೆಲೆಯಲ್ಲಿ ಅತ್ಯಾಕರ್ಷಕ ಫೀಚರ್ಸ್‌ ಒಳಗೊಂಡಿರುವ ವಿಶೇಷ ಸ್ಮಾರ್ಟ್‌ಫೋನ್‌ ಇದಾಗಿದೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಎನಿಸಿಕೊಂಡಿದ್ದರು ಬಳಕೆದಾರರಿಗೆ ಅಗತ್ಯವಿರುವ ಎಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರುವುದು ವಿಶೇಷ. ಇನ್ನು ಈ ಸ್ಮಾರ್ಟ್‌ಫೋನ್‌ ಯುನಿಸಾಕ್ T606 (Unisoc T606) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇಂದಿನಿಂದ ಈ ಸ್ಮಾರ್ಟ್‌ಫೋನ್‌ ಅನ್ನು ಕೇವಲ 6,999 ರೂ.ಗಳಿಗೆ ಖರೀದಿಸಬಹುದು!

ಹೌದು, ಮೊಟೊ E13 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದಿನಿಂದ ಪ್ರಾರಂಭವಾಗಿದೆ. ಈ ಸ್ಮಾರ್ಟ್‌ಫೋನ್‌ 2GB+64GB ಮತ್ತು 4GB+64GB ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಕಾಸ್ಮಿಕ್ ಬ್ಲಾಕ್, ಅರೋರಾ ಗ್ರೀನ್ ಮತ್ತು ಕ್ರೀಮಿ ವೈಟ್ ಕಲರ್‌ ಆಯ್ಕೆಗಳಲ್ಲಿ ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಬಹುದಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ
ಓದಿರಿ.

ಮೊಟೊ E13 ಬೆಲೆ ಎಷ್ಟು? ಫಸ್ಟ್‌ ಸೇಲ್‌ ಆಫರ್‌ ಏನು?

ಮೊಟೊ E13 ಸ್ಮಾರ್ಟ್‌ಫೋನ್‌ 2GB RAM +64GB ಆಯ್ಕೆಯು 6,999 ರೂ ಬೆಲೆಯಲ್ಲಿ ಲಭ್ಯವಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಆಯ್ಕೆಯು 7,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಫಸ್ಟ್‌ ಸೇಲ್‌ ಪ್ರಯುಕ್ತ ಸ್ಮಾರ್ಟ್‌ಫೋನ್‌ ಖರೀದಿಸುವವರು ಜಿಯೋ ಬಳಕೆದದಾರರು ಆಗಿದ್ದರೆ 700ರೂ.ಗಳ ಕ್ಯಾಶ್‌ಬ್ಯಾಕ್‌ ಲಭ್ಯವಾಗಲಿದೆ. ಜೊತೆಗೆ ರಿಲಯನ್ಸ್ ಜಿಯೋ ಬಳಕೆದಾರರು ಸ್ಮಾರ್ಟ್‌ಫೋನ್ ಖರೀದಿಯ ಮೇಲೆ 2,500ರೂ. ಮೌಲ್ಯದ ವಿಶೇಷ ಪ್ರಯೋಜನಗಳನ್ನು ಸಹ ಪಡೆಯಲಿದ್ದಾರೆ. ಇನ್ನು ಸ್ಮಾರ್ಟ್‌ಫೋನ್‌ ಕಾಸ್ಮಿಕ್ ಬ್ಲಾಕ್, ಅರೋರಾ ಗ್ರೀನ್ ಮತ್ತು ಕೆನೆ ವೈಟ್ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.

ಇಂದಿನಿಂದ ಈ ಸ್ಮಾರ್ಟ್‌ಫೋನ್‌ ಅನ್ನು ಕೇವಲ 6,999 ರೂ.ಗಳಿಗೆ ಖರೀದಿಸಬಹುದು!

ಮೊಟೊ E13 ಫೀಚರ್ಸ್‌ ಹೇಗಿದೆ?

ಮೊಟೊ E13 ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿದೆ. ಹಾಗೆಯೇ ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಇದು ಯುನಿಸಾಕ್ T606 (Unisoc T606) ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 2GB RAM+64GB ಮತ್ತು 4GB RAM+64GB ಸ್ಟೋರೇಜ್‌ ಸಾಮರ್ಥ್ಯ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.

ಮೊಟೊ E13 ಕ್ಯಾಮೆರಾ ಏನಿದೆ?

ಮೊಟೊ E13 ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್ ಫೋನ್‌ ಆಗಿದ್ದು, ಸಿಂಗಲ್‌ ರಿಯರ್‌ ಕ್ಯಾಮೆರಾ ಪಡೆದಿದೆ. ಅದು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ದಲ್ಲಿ ಇದ್ದು, ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ಪಡೆದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದು ಆಟೋ ಸ್ಮೈಲ್ ಕ್ಯಾಪ್ಚರ್, ಫೇಸ್ ಬ್ಯೂಟಿ ಮತ್ತು ಪೋರ್ಟ್ರೇಟ್ ಮೋಡ್‌ನಂತಹ ಇಂಟೆಲಿಜೆನ್ಸ್‌ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಇಂದಿನಿಂದ ಈ ಸ್ಮಾರ್ಟ್‌ಫೋನ್‌ ಅನ್ನು ಕೇವಲ 6,999 ರೂ.ಗಳಿಗೆ ಖರೀದಿಸಬಹುದು!

ಮೊಟೊ E13 ಬ್ಯಾಟರಿ ಬ್ಯಾಕ್‌ಅಪ್‌ ವಿವರ

ಮೊಟೊ E13 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್ 5.0, ಜಿಪಿಎಸ್, ಫೇಸ್ ಅನ್‌ಲಾಕ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಡಾಲ್ಬಿ ಅಟ್ಮಾಸ್ ಬೆಂಬಲ, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಐಪಿ52 ಸ್ಪ್ಲಾಶ್-ರೆಸಿಸ್ಟೆಂಟ್ ಕೋಟಿಂಗ್ ಆಯ್ಕೆ ಪಡೆದಿದೆ.

Best Mobiles in India

English summary
Moto E13 provides a multidimensional audio-visual experience with Dolby Atmos audio and has dual-band Wi-Fi connectivity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+