ಅಗ್ಗದ ಮೊಟೊ e13 ಬೆಲೆಯಲ್ಲಿ ಆಕರ್ಷಕ ರಿಯಾಯಿತಿ!..ಬಿಗ್ ಬ್ಯಾಟರಿ ಸೌಲಭ್ಯ!
ಪ್ರಮುಖ ಇ ಕಾಮರ್ಸ್ ತಾಣವಾಗಿ ಕಾಣಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಕೊಡುಗೆಗಳನ್ನು ಘೋಷಿಸಿ ಗ್ರಾಹಕರನ್ನು ಸೆಳೆಯುತ್ತದೆ. ಆ ಪೈಕಿ ಅಗ್ಗದ ಹಾಗೂ ದುಬಾರಿ ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್ ಲಭ್ಯ ಮಾಡಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ e13 ಅತ್ಯುತ್ತಮ ಆಫರ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಮೊಟೊ e13 ಸ್ಮಾರ್ಟ್‌ಫೋನ್ ಶೇ. 40% ರಷ್ಟು ಡಿಸ್ಕೌಂಟ್ ಹೊಂದಿದ್ದು, 4 GB RAM + 64 GB ವೇರಿಯಂಟ್ ಮಾದರಿಯು 6,499ರೂ. ಗಳ ಪ್ರೈಸ್ ಟ್ಯಾಗ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಕೊಡುಗೆಗಳು ಕೂಡಾ ದೊರೆಯುತ್ತವೆ.

ಇನ್ನು ಈ ಮೊಟೊರೊಲಾ e13 ಮೊಬೈಲ್ ಯುನಿಸಾಕ್ T606 (Unisoc T606) ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಹಾಗೆಯೇ ಇದು 2GB RAM + 64GB, 4GB RAM + 64GB ಮತ್ತು 8 GB RAM + 128 GB ಸ್ಟೋರೇಜ್ ಆಯ್ಕೆ ಕೂಡಾ ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ e13 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ e13 ಫೋನ್ - ಫೀಚರ್ಸ್ ಹೀಗಿವೆ
ಮೊಟೊ e13 ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಮೊಟೊರೊಲಾ e13 ಫೋನ್ ಯುನಿಸಾಕ್ T606 (Unisoc T606) ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.
ಅದೇ ರೀತಿ 2GB RAM + 64GB, 4GB RAM + 64GB ಮತ್ತು 8 GB RAM + 128 GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಗಳನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಮೊಟೊ e13 ಮೊಬೈಲ್ ಎಂಟ್ರಿ ಲೆವೆಲ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು, ಇದರ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಈ ಮೊಬೈಲ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಎಲ್‌ಇಡಿ ಫ್ಲ್ಯಾಷ್ ಸೌಲಭ್ಯ ಸಹ ಪಡೆದಿದೆ. ಇದಲ್ಲದೆ ಈ ಮೊಬೈಲ್ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಮೊಟೊ ಸಂಸ್ಥೆಯ ಈ ಮೊಟೊರೊಲಾ e13 ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಒಳಗೊಂಡಿದ್ದು, ಇದಕ್ಕೆ ಅನುಗುಣವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಸಹ ಹೊಂದಿದೆ.
ಇದರೊಂದಿಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ 5.0, ಜಿಪಿಎಸ್, ಫೇಸ್ ಅನ್‌ಲಾಕ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಡಾಲ್ಬಿ ಅಟ್ಮಾಸ್ ಬೆಂಬಲ, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಐಪಿ52 ಸ್ಪ್ಲಾಶ್-ರೆಸಿಸ್ಟೆಂಟ್ ಕೋಟಿಂಗ್ ಆಯ್ಕೆಗಳ ಅನ್ನು ಇದು ಪಡೆದುಕೊಂಡಿದೆ. ಇದು ಗ್ರೀನ್, ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








