Top smartphones: 10 ಸಾವಿರದೊಳಗೆ ಇವೇ ಟಾಪ್ ಸ್ಮಾರ್ಟ್‌ಫೋನ್‌ಗಳು! ಸೂಪರ್ ಫೀಚರ್ಸ್
ಸ್ಮಾರ್ಟ್‌ಫೋನ್‌ಗಳು (smartphones) ಅಗ್ಗದ ಬೆಲೆಯಿಂದ ಹಿಡಿದು ದುಬಾರಿ ಬೆಲೆಯಲ್ಲಿ ಲಭ್ಯ ಇವೆ. ಈ ಮೂಲಕ ಬಳಕೆದಾರರು ತಮ್ಮ ಅಗತ್ಯಕ್ಕೆ ತಕ್ಕಂತೆ ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿ ಮಾಡಬಹುದಾಗಿದೆ. ಅದರಲ್ಲೂ ವಿವಿಧ ಬ್ರ್ಯಾಂಡ್‌ಗಳು ಒಂದಕ್ಕೊಂದು ಪೈಪೋಟಿಯಲ್ಲಿ ಕೇವಲ ಹತ್ತು ಸಾವಿರದೊಳಗೆ ಅತ್ಯುತ್ತಮ ಸೌಲಭ್ಯ ನೀಡುವ ಫೋನ್‌ಗಳನ್ನು ಲಾಂಚ್ ಮಾಡಿವೆ.
ಹೌದು, ಅಗ್ಗದ ದರದಲ್ಲಿ ಸ್ಮಾರ್ಟ್‌ಫೋನ್‌ಗಳು ಲಭ್ಯ ಇವೆ ಎಂದ ಮಾತ್ರಕ್ಕೆ ಅವು ಕಡಿಮೆ ಫೀಚರ್ಸ್ ಹೊಂದಿವೆ ಅಂತೇನು ಇಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ನಂಬರ್ ಒನ್ ಎನಿಸಿಕೊಳ್ಳುವ ಉದ್ದೇಶದಿಂದ ವಿವಿಧ ಬ್ರ್ಯಾಂಡ್‌ಗಳು ಸುಧಾರಿತ ಫೀಚರ್ಸ್ ನೊಂದಿಗೆ ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬರುತ್ತವೆ. ಅದರಲ್ಲಿ ಸ್ಯಾಮ್‌ಸಂಗ್, ಮೊಟೊ, ರಿಯಲ್‌ಮಿ ಸೇರಿದಂತೆ ಅನೇಕ ಕಂಪೆನಿಯ ಫೋನ್‌ಗಳನ್ನು ಕಾಣಬಹುದು. ಈ ನಡುವೆ ನೀವೇನಾದರೂ 10 ಸಾವಿರದೊಳಗೆ ಫೋನ್ ಖರೀದಿ ಮಾಡಬೇಕು ಎಂದುಕೊಂಡಿದ್ದರೆ ಇಲ್ಲಿವೆ ಆಕರ್ಷಕ ಫೋನ್‌ಗಳು.

ಮೊಟೊ E13: ಈ ಸ್ಮಾರ್ಟ್‌ಫೋನ್ (Moto E13) ಅನ್ನು ನೀವು 6,999 ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, ಯೂನಿಸೋಕ್ T606 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಇದರಲ್ಲಿದ್ದು, 10W ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್ ಕ್ಯಾಮೆರಾ ಅತ್ಯುತ್ತಮ ಚಿತ್ರಗಳನ್ನು ಸೆರೆಹಿಡಿಯಲು ಯೋಗ್ಯವಾಗಿದೆ. ಇನ್ನು ಈ ಫೋನ್ ಆಂಡ್ರಾಯ್ಡ್ 13 ಓಎಸ್‌ನಲ್ಲಿ ರನ್ ಆಗಲಿದೆ.
ಲಾವಾ ಬ್ಲೇಜ್ 2 5G: ಈ ಫೋನ್ ಅನ್ನು (Lava Blaze 2 5G) ನೀವು 9,999 ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದು ಗ್ಲಾಸ್ ಬ್ಯಾಕ್ ಮತ್ತು ಲಾವಾ ರಿಂಗ್ ಲೈಟ್ ಎಂದು ಕರೆಯುವ ವಿಭಿನ್ನ ವೃತ್ತಾಕಾರದ ಕ್ಯಾಮೆರಾ ರಚನೆಯನ್ನು ಹೊಂದಿದೆ. ಹಾಗೆಯೇ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು. 90 Hz ರಿಫ್ರೆಶ್ ರೇಟ್ ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಸೆನ್ಸರ್ ಹಾಗೂ 0.08 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಅನ್ನು ಈ ಫೋನ್‌ನಲ್ಲಿ ಕಾಣಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 : ಈ ಸ್ಮಾರ್ಟ್‌ಫೋನ್ ಅನ್ನು (Samsung GalaxyM04) ನೀವು 8,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ ಹೆಚ್‌ಡಿ+ ರೆಸಲ್ಯೂಶನ್‌ನೊಂದಿಗೆ ದೊಡ್ಡ ಮತ್ತು ಪ್ರಕಾಶಮಾನವಾದ 6.5 ಇಂಚಿನ ಡಿಸ್‌ಪ್ಲೇಯೊಂದಿಗೆ ಕಾಣಿಸಿಕೊಂಡಿದೆ. ಹಾಗೆಯೇ ಮೀಡಿಯಾಟೆಕ್ ಹಿಲಿಯೋ P35 ನಿಂದ ಕಾರ್ಯನಿರ್ವಹಿಸಲಿದ್ದು, 13 ಮೆಗಾಪಿಕ್ಸೆಲ್ ಮುಖ್ಯ ಸೆನ್ಸರ್ ಮೂಲಕ ಈ ಫೋನ್‌ನಲ್ಲಿ ಉತ್ತಮ ಸ್ನ್ಯಾಪ್‌ಗಳನ್ನು ಪಡೆಯಬಹುದಾಗಿದೆ.
ಪೊಕೊ M6 ಪ್ರೊ 5G: ಈ ಫೋನ್ (Poco M6 Pro 5G) ಅನ್ನು ನೀವು 10,999 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದನ್ನು ರೆಡ್ಮಿ 12 ನ ಮರುಬ್ರಾಂಡೆಡ್ ಆವೃತ್ತಿ ಎಂದೂ ಸಹ ಕರೆಯಲಾಗುತ್ತದೆ. ಅದರಂತೆ ಈ ಫೋನ್ 90Hz ರಿಫ್ರೆಶ್ ರೇಟ್‌ನೊಂದಿಗೆ 6.79 ಇಂಚಿನ ಫುಲ್‌ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ನಿಂದ ಕಾರ್ಯನಿರ್ವಹಿಸಲಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 18W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಈ ಫೋನ್‌ಗೆ ಇನ್ನಷ್ಟು ಶಕ್ತಿ ನೀಡಿದೆ.
ಟೆಕ್ನೋ ಸ್ಪಾರ್ಕ್ 7T: ಈ ಫೋನ್ ಅನ್ನು ನೀವು 8,999 ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. 6.52 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G 35 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 4 GB RAM ಆಯ್ಕೆ ಈ ಫೋನ್‌ಗೆ ಇನ್ನಷ್ಟು ಶಕ್ತಿ ನೀಡಲಿದೆ. ಹಾಗೆಯೇ 48 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಈ ಫೋನ್‌ನಲ್ಲಿದೆ .

ಒಪ್ಪೋ A18 : ಈ ಫೋನ್ (OPPO A18) ಅನ್ನು 9,499ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದು. ಇದು 6.56 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದರಲ್ಲೂ ಸಹ 4 GB RAM ಆಯ್ಕೆ ನೀಡಲಾಗಿದೆ. ಉಳಿದಂತೆ ಈ ಫೋನ್ 8 ಮೆಗಾಪಿಕ್ಸೆಲ್ + 2 ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಮೂಲಕ ಪ್ಯಾಕ್ ಆಗಿದೆ.


Click it and Unblock the Notifications








