ಹೊಸ ಮೊಟೊ E20 ಸ್ಮಾರ್ಟ್‌ಫೋನ್ ಫೀಚರ್ಸ್‌ ಲೀಕ್; ವಿಶೇಷತೆ ಏನು?

|

ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇತ್ತೀಚಿಗಷ್ಟೆ ಮೊಟೊರೊಲಾ ಕಂಪನಿಯು ಎಡ್ಜ್ ಸರಣಿಯಲ್ಲಿ ಫೋನ್‌ಗಳನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅದರ ಬೆನ್ನಲ್ಲೇ ಈಗ ಮೊಟೊ E20 ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಕಲ ತಯಾರಿ ನಡೆಸಿದೆ.

ಮೊಟೊರೊಲಾ

ಹೌದು, ಲೆನೊವೊ ಒಡೆತನದ ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ E20 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಫೋನ್ ಅಧಿಕೃತ ಬಿಡುಗಡೆಗೆ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಫೀಚರ್ಸ್‌ಗಳು ಸೋರಿಕೆಯಾಗಿದೆ. ಲೀಕ್ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರದೆ. ಹಾಗೆಯೇ ಸಿಲಿಂಡರಾಕಾರದ ಕ್ಯಾಮೆರಾ ಮಾಡ್ಯೂಲ್‌ನೊಂದಿಗೆ ಡ್ಯುಯಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಬಹುದು ಎಂದು ಹೇಳಲಾಗಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ಮೊಟೊ E20 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೊಟೊ E20 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದು 6.5 ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಮೊಟೊ E20 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ SoC ಪ್ರೊಸೆಸರ್‌ ಬಲವನ್ನು ಪಡೆದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ ಇದೊಂದು ಎಂಟ್ರಿ ಲೆವೆಲ್ ಫೋನ್ ಆಗಿರಲಿದ್ದು, ಈ ನಿಟ್ಟಿನಲ್ಲಿ 2GB RAM ಮತ್ತು 32GB ಆಂತರೀಕ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಮೊಟೊ E20 ಸ್ಮಾರ್ಟ್‌ಫೋನ್ ಡ್ಯಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ E20 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಅನ್ನು ಬೆಂಬಲಿದೆ. ಅಲ್ಲದೆ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಸ್ಪೀಕರ್ ಗ್ರಿಲ್ ಕೆಳಭಾಗದ ತುದಿಯಲ್ಲಿ ಕುಳಿತುಕೊಳ್ಳುತ್ತವೆ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಸ್ಮಾರ್ಟ್‌ಫೋನ್‌ನ ಮೇಲ್ಭಾಗದ ತುದಿಯಲ್ಲಿ ಕಾಣುತ್ತದೆ. ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕ ಹಾಗೂ ಬೆಲೆಯ ದಿನಾಂಕದ ಬಗ್ಗೆ ಯಾವುದೇ ವಿವರಗಳನ್ನು ಕಂಪೆನಿ ಹಂಚಿಕೊಂಡಿಲ್ಲ.

Best Mobiles in India

English summary
Moto E20 Specs And Renders Leak, 4,000mah Battery Tipped.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X