ಭಾರತದಲ್ಲಿ ಮೊಟೊ E22s ಬಿಡುಗಡೆಗೆ ದಿನಾಂಕ ಫಿಕ್ಸ್‌: ಫೀಚರ್ಸ್‌ ಏನು?

|

ಪ್ರಮುಖ ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ಮೊಟೊರೊಲಾ ಈಗಾಗಲೇ ವಿವಿಧ ಫೀಚರ್ಸ್‌ ಇರುವ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದರ ನಡುವೆ ಈಗ ಮತ್ತೊಂದು ಸ್ಮಾರ್ಟ್‌ಫೋನ್‌ ಅನಾವರಣಕ್ಕೆ ಸಜ್ಜುಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಆಗುವ ಮುನ್ನವೇ ಅದರ ಫೀಚರ್ಸ್‌ ಬಗ್ಗೆ ಕಂಪೆನಿ ಮಾಹಿತಿಯನ್ನು ಬಹಿರಂಗಪಡಿಸಿದೆ.

ಮೊಟೊರೊಲಾ

ಹೌದು, ಮೊಟೊರೊಲಾದ ಮೊಟೊ E22s ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಅಕ್ಟೋಬರ್ 17 ನ್ನು ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಹೊಂದಿದ್ದು, ಮೀಡಿಯಾ ಟೆಕ್‌ ಹಿಲಿಯೋ G37 SoC ನಿಂದ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದರಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಇದ್ದು, 5,000mAh ಸಾಮರ್ಥ್ಯ ಬ್ಯಾಟರಿ ಪಡೆದಿದೆ. ಹಾಗಿದ್ರೆ ಇದರ ಹೆಚ್ಚಿನ ಫೀಚರ್ಸ್‌ ಹಾಗೂ ನಿರೀಕ್ಷಿತ ಬೆಲೆಯನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ ವಿವರ

ಡಿಸ್‌ಪ್ಲೇ ವಿವರ

ಮೊಟೊ E22s ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಇದು 720x1,600 ಪಿಕ್ಸೆಲ್‌ ರೆಸಲ್ಯೂಶನ್‌ ಪಡೆದಿದೆ. ಹಾಗೆಯೇ 20:9 ಆಕಾರ ಅನುಪಾತದೊಂದಿಗೆ IPS LCD ಡಿಸ್‌ಪ್ಲೇ ಅಯ್ಕೆ ಪಡೆದಿದ್ದು, 90Hz ರಿಫ್ರೆಶ್ ರೇಟ್ ಹಾಗೂ 268ppi ಪಿಕ್ಸೆಲ್‌ ಡೆನ್ಸಿಟಿ ಹೊಂದಿದೆ. ಇನ್ನು ಡಿಸ್‌ಪ್ಲೇಯ ಮೇಲ್ಭಾಗದಲ್ಲಿ ಹೋಲ್ ಪಂಚ್‌ ಕಟೌಟ್‌ ನಿಂದ ಕೂಡಿದೆ. ಈ ಎಲ್ಲಾ ಮಾಹಿತಿಯನ್ನು ಮೊಟೊರೊಲಾ ತನ್ನ ವೆಬ್‌ಸೈಟ್‌ ಪುಟದಲ್ಲಿ ಪ್ರದರ್ಶಿಸಿದೆ.

ಪ್ರೊಸೆಸರ್‌ ಮಾಹಿತಿ

ಪ್ರೊಸೆಸರ್‌ ಮಾಹಿತಿ

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 12 ರಲ್ಲಿ ರನ್‌ ಆಗಲಿದೆ. ಇದರೊಂದಿಗೆ 4GB RAM ಹಾಗೂ 64GB ಇಂಟರ್ನಲ್‌ ಸ್ಟೋರೇಜ್‌ ಆಯ್ಕೆ ಇದರಲ್ಲಿದೆ. ಪ್ರಮುಖವಾಗಿ ಇಂಟರ್ನಲ್‌ ಸ್ಟೋರೇಜ್ ಅನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಈ ಮೊಟೊ E22s ಸ್ಮಾರ್ಟ್‌ಫೋನ್‌ ರಿಯರ್‌ ಡ್ಯುಯಲ್‌‌ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಪ್ರಮುಖ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸರ್‌, ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ಪಡೆದಿದೆ. ಇದರೊಂದಿಗೆ ಸೆಲ್ಪಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದಿದೆ.

ಬ್ಯಾಟರಿ ಹಾಗೂ ಇತರೆ

ಬ್ಯಾಟರಿ ಹಾಗೂ ಇತರೆ

ಮೊಟೊ E22s ಸ್ಮಾರ್ಟ್‌ಫೋನ್ 10W ಚಾರ್ಜಿಂಗ್‌ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನುಳಿದಂತೆ ಬಯೋಮೆಟ್ರಿಕ್ ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಆಯ್ಕೆಯಂತಹ ಫೀಚರ್ಸ್‌ಗಳನ್ನು ಈ ಫೋನ್‌ ಪಡೆದಿದೆ.

ಬೆಲೆ ಹಾಗೂ ಲಭ್ಯತೆ

ಬೆಲೆ ಹಾಗೂ ಲಭ್ಯತೆ

ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಹಾಗೂ ಇತರ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಲಭ್ಯವಿರಲಿದೆ. ಆದರೆ, ಈ ಸ್ಮಾರ್ಟ್‌ಫೋನ್‌ನ ನಿಖರವಾದ ಬೆಲೆ ಬಗ್ಗೆ ಮೊಟೊರೊಲಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದಾಗ್ಯೂ 4GB RAM ಹಾಗೂ 64GB ಇಂಟರ್ನಲ್‌ ಸ್ಟೋರೇಜ್‌ ವೇರಿಯಂಟ್‌ಗೆ ಸುಮಾರು 12,700ರೂ. ಗಳನ್ನು ನಿಗದಿ ಮಾಡಬಹುದು ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಎರಡು ಬಣ್ಣಗಳಲ್ಲಿ ಲಭ್ಯವಿದ್ದು, ಆರ್ಕ್ಟಿಕ್ ಬ್ಲೂ ಹಾಗೂ ಎಕೋ ಬ್ಲಾಕ್ ಕಲರ್ ಹೊಂದಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಅನ್ನು ಕಳೆದ ಆಗಸ್ಟ್‌ನಲ್ಲಿ ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಅಲ್ಲಿ 4GB RAM ಹಾಗೂ 64GB ಇಂಟರ್ನಲ್‌ ಸ್ಟೋರೇಜ್‌ ವೇರಿಯಂಟ್‌ಗೆ EUR 159.99 ನಿಗದಿ ಮಾಡಲಾಗಿದೆ. ಇದೇ ಆಧಾರದಲ್ಲಿ ಭಾರತದಲ್ಲಿ 12,700ರೂ. ಗಳಿಗೆ ಸಿಗಬಹುದು ಎನ್ನುವ ಮಾತುಗಳು ಟೆಕ್‌ ವಲಯದಿಂದ ಕೇಳಿಬರುತ್ತಿವೆ.

Best Mobiles in India

English summary
Motorola is also a major player in the smartphone segment. In this article Moto E22s release date and its features are given.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X