ಮೋಟೋ E30 ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಯಾವುದು?

|

ಮೊಟೊರೊಲಾ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ E30 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸ ಹೊಂದಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಮೋಟೋ E30

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ E30 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಗೂಗಲ್‌ನ ಸುವ್ಯವಸ್ಥಿತ ಆಂಡ್ರಾಯ್ಡ್‌ 11 Go ಪ್ಲಾಟ್‌ಫಾರ್ಮ್ ಮೂಲಕ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲೂ ಮತ್ತು ಅರ್ಬನ್‌ ಗ್ರೇ ಬಣ್ಣದ ಆಯ್ಕೆಗಳಲ್ಲಿ ಲಬ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ E30 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಮ್ಯಾಕ್ಸ್ ವಿಷನ್ IPS ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್‌ T700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 Go ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ E30 ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ E30 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸಲಿದೆ. ಸಿಂಗಲ್‌ ಚಾರ್ಜ್‌ನಲ್ಲಿ 40 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಎಲ್‌ಟಿಇ, Wi-Fi 802.11 a/b/g/n, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ E30 ಸ್ಮಾರ್ಟ್‌ಫೋನ್‌ ಏಕೈಕ 2GB + 32GB ಸ್ಟೋರೇಜ್ ರೂಪಾಂತರಕ್ಕಾಗಿ ಕೊಲಂಬಿಯಾದಲ್ಲಿ COP 529,900 (ಸುಮಾರು 10,200ರೂ)ಬೆಲೆಗೆ ನಿಗದಿಪಡಿಸಲಾಗಿದೆ. ಇದು ಕೊಲಂಬಿಯಾ ಮತ್ತು ಸ್ಲೋವಾಕಿಯಾ ಸೇರಿದಂತೆ ಕೆಲವು ದಕ್ಷಿಣ ಅಮೆರಿಕಾದ ಪ್ರದೇಶಗಳಲ್ಲಿ ನೀಲಿ ಮತ್ತು ಅರ್ಬನ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಫೋನ್ ಖರೀದಿಸಲು ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಮೊಟೊರೊಲಾ

ಇನ್ನು ಕಳೆದ ತಿಂಗಳು ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ T700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 10W ಚಾರ್ಜಿಂಗ್ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Moto E30 has been launched as the latest budget phone from Motorola.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X