ಬಜೆಟ್ ಬೆಲೆಯಲ್ಲಿ ಎಂಟ್ರಿ ಕೊಟ್ಟ ಮೊಟೊ E32 ಫೋನ್!..ಅಬ್ಬಬ್ಬಾ ಏನೆಲ್ಲಾ ಫೀಚರ್ಸ್!
ಮೊಟೊರೊಲಾ ಕಂಪೆನಿಯ ಹೊಸ ಮೊಟೊ E32 ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಈಗಾಗಲೇ ಫೀಚರ್ಸ್ ಬಹಿರಂಗ ಪಡಿಸುವ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಈ ಫೋನ್ ಎಂಟ್ರಿ ಲೆವೆಲ್ ಪ್ರೈಸ್ ಟ್ಯಾಗ್‌ನಲ್ಲಿ ಬಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಒಳಗೊಂಡಿದೆ. ಜೊತೆಗೆ 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೊಟೊ E32 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ಮೊಟೊರೊಲಾದ My UX ನಲ್ಲಿ ರನ್ ಆಗಲಿದೆ. ಮೊಟೊ E32 ಫೋನ್ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಹಾಗಾದ್ರೆ ಮೊಟೊ E32 ಫೋನಿನ ಫೀಚರ್ಸ್ ಹೇಗಿದೆ? ಬೆಲೆ ಎಷ್ಟಿದೆ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

6.5-ಇಂಚಿನ ಡಿಸ್‌ಪ್ಲೇ
ಮೊಟೊ E32 ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಬಲವೇನು?
ಮೊಟೊ E32 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ಮೊಟೊರೊಲಾ ಕಂಪೆನಿಯ My UXನಲ್ಲಿ ರನ್ ಆಗಲಿದೆ. ಇದು ಆಂಡ್ರಾಯ್ಡ್ 13 ಅಪ್‌ಗ್ರೇಡ್ ಅನ್ನು ಪಡೆಯುವುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಎರಡು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಒದಗಿಸಲಾಗುವುದು ಎಂದು ಮೊಟೊರೊಲಾ ಕಂಪನಿಯು ದೃಢಪಡಿಸಿದೆ. ಹಾಗೆಯೇ ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಮೊಟೊ E32 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾಗಳ ಮೂಲಕ 30fps ಫುಲ್ HD ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?
ಮೊಟೊ E32 ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11ac, ಬ್ಲೂಟೂತ್ 5.0, GPS, ಮೆಮೊರಿ ಕಾರ್ಡ್ ಸ್ಲಾಟ್, USB-C ಪೋರ್ಟ್, 3.5mm ಆಡಿಯೋ ಜ್ಯಾಕ್ ಮತ್ತು IP52 ರೇಟಿಂಗ್ ಬೆಂಬಲವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಡ್ಯುಯಲ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ E32 ಸ್ಮಾರ್ಟ್‌ಫೋನ್ ಭಾರತದಲ್ಲಿ ಸಿಂಗಲ್ ವೇರಿಯೆಂಟ್ ಆಯ್ಕೆಯಲ್ಲಿ ಬರಲಿದೆ. ಇದರ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯು 10,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದನ್ನು ಫ್ಲಿಪ್‌ಕಾರ್ಟ್ ಮೂಲಕ ಆರ್ಕ್ಟಿಕ್ ಬ್ಲೂ ಮತ್ತು ಇಕೋ ಬ್ಲ್ಯಾಕ್‌ನಲ್ಲಿ ಖರೀದಿಸಬಹುದು.


Click it and Unblock the Notifications








