ಭಾರತದಲ್ಲಿ ಮೊಟೊ E32 ಫೋನ್ ಲಾಂಚ್ ಡೇಟ್ ಬಹಿರಂಗ! ಪ್ರೊಸೆಸರ್ ಯಾವುದು?
ಮೊಟೊರೊಲಾ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಸದ್ಯ ಇದೀಗ ತನ್ನ ಹೊಸ ಮೊಟೊ E32 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಇದೇ ಅಕ್ಟೋಬರ್ 7 ರಂದು ಎಂಟ್ರಿ ನೀಡಲಿದೆ ಎಂದು ಮೊಟೊರೊಲಾ ಕಂಪೆನಿ ಘೋಷಣೆ ಮಾಡಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೊಟೊ E32 ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ G37SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಮೊಟೊ E32 ಸ್ಮಾರ್ಟ್‌ಫೋನ್ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್ ಹೇಗಿದೆ?
ಮೊಟೊ E32 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮೈ UX ಇಂಟರ್‌ಫೇಸ್‌ನೊಂದಿಗೆ ಆಂಡ್ರಾಯ್ಡ್ 12 ನಲ್ಲಿ ರನ್ ಆಗಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 2 ವರ್ಷಗಳ OS ಅಪ್ಡೇಟ್ ಮತ್ತು ಸೆಕ್ಯುರಿಟಿ ಪ್ಯಾಚ್‌ಗಳನ್ನು ನೀಡುವ ಭರವಸೆ ನೀಡಿದೆ. ಹಾಗೆಯೇ 4GB RAM + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಮೊಟೊ E32 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E32 ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಆಂಬಿಯೆಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದು ಡ್ಯುಯಲ್-ಸಿಮ್ 4G ಸ್ಮಾರ್ಟ್‌ಫೋನ್ ಆಗಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಫೇಸ್ ಅನ್‌ಲಾಕ್ ಟೆಕ್ನಾಲಜಿಯನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ E32 ಸ್ಮಾರ್ಟ್‌ಫೋನ್ ಭಾರತದಲ್ಲಿ ತನ್ನ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಫ್ಲಿಪ್‌ಕಾರ್ಟ್ ಮತ್ತು ಇತರ ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಯುರೋಪ್‌ನಲ್ಲಿ ಲಾಂಚ್ ಆಗಿದ್ದು, ಯುರೋಪ್‌ನಲ್ಲಿ EUR 149 (ಸುಮಾರು 12,000ರೂ) ಬೆಲೆಯನ್ನು ಹೊಂದಿದೆ. ಇದು ಭಾರತದಲ್ಲಿ ಕಾಸ್ಮಿಕ್ ಬ್ಲ್ಯಾಕ್ ಮತ್ತು ಐಸ್ ಬರ್ಗ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.


Click it and Unblock the Notifications








