ಮೊಟೊ E32s ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?..ಖರೀದಿಗೆ ಉತ್ತಮವೇ?

|

ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ E32s ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೊಟೊ E32s ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್‌ ಅನ್ನು ಹೊಂದಿದೆ.

ಮೊಟೊ E32s ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?..ಖರೀದಿಗೆ ಉತ್ತಮವೇ?

ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ E32s ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು (ಜೂ. 6) ನಡೆಯಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 3GB RAM + 32 GB ಮತ್ತು 4GB RAM + 64 GB ಆಗಿವೆ. ಹಾಗೆಯೇ ಈ ಫೋನ್ ಸ್ಲೇಟ್ ಗ್ರೇ ಮತ್ತು ಮಿಸ್ಟಿ ಸಿಲ್ವರ್ ಬಣ್ಣಗಳ ಆಯ್ಕೆ ಅನ್ನು ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆ 8,999 ರೂ. ಆಗಿದೆ. ಹಾಗಾದರೇ ಮೊಟೊ E32s ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ಮೊಟೊ E32s ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಸಹ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಸಹ ಬೆಂಬಲಿಸಲಿದೆ. ಜೊತೆಗೆ ಪಾಲಿಕಾರ್ಬೊನೇಟ್ ಬ್ಯಾಕ್ ಸ್ಪೋರ್ಟಿಂಗ್ PMMA ಫಿನಿಶ್‌ನೊಂದಿಗೆ ಬರುತ್ತದೆ.

ಪ್ರೊಸೆಸರ್‌ ಯಾವುದು?
ಮೋಟೋ E32s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ MyUX ಅನ್ನು ಬಾಕ್ಸ್‌ನಲ್ಲಿ ರನ್‌ ಆಗಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊ E32s ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?..ಖರೀದಿಗೆ ಉತ್ತಮವೇ?

ಕ್ಯಾಮೆರಾ ಸೆನ್ಸಾರ್ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಮ್ಯಾಪಿಂಗ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಮೋಟೋ E32s ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಜೊತೆಗೆ ಈ ಫೋನ್ AI ಫೇಸ್ ಅನ್‌ಲಾಕ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 9,299ರೂ. ಬೆಲೆಯನ್ನು ಹೊಂದಿದೆ. ಇದು ಲಾಂಚ್‌ ಆಫರ್‌ನಲ್ಲಿ 8,999 ರೂ.ಬೆಲೆಗೆ ಲಭ್ಯವಾಗಲಿದೆ. ಇದು ಜೂನ್ 6 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇನ್ನು ಈ ಫೋನ್‌ ಸ್ಲೇಟ್ ಗ್ರೇ ಮತ್ತು ಮಿಸ್ಟಿ ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Moto E32s First Sale Starts Today at 12 Noon via Flipkart: Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X