ಭಾರತದಲ್ಲಿ ಮೋಟೋ E32s ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ E32s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಜಿಯೋಮಾರ್ಟ್ ಸ್ಟೋರ್‌ನಲ್ಲಿ ಖರೀದಿಗೆ ಲಭ್ಯವಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ E32s ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 9,299ರೂ.ಬೆಲೆಗೆ ಎಂಟ್ರಿ ನೀಡಿದೆ. ಅಲ್ಲದೆ ಲಾಂಚ್ ಆಫರ್‌ನಲ್ಲಿ ಈ ಫೋನ್ 8,999 ರೂ.ಬೆಲೆಗೆ ಲಭ್ಯವಾಗಲಿದೆ. ಇದು ಜೂನ್ 6 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ಮೋಟೋ E32s ಸ್ಮಾರ್ಟ್‌ಫೋನ್ 6.5-ಇಂಚಿನ IPS LCD HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಸಹ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಸಹ ಬೆಂಬಲಿಸಲಿದೆ. ಜೊತೆಗೆ ಪಾಲಿಕಾರ್ಬೊನೇಟ್ ಬ್ಯಾಕ್ ಸ್ಪೋರ್ಟಿಂಗ್ PMMA ಫಿನಿಶ್‌ನೊಂದಿಗೆ ಬರುತ್ತದೆ.

ಪ್ರೊಸೆಸರ್ ಯಾವುದು?
ಮೋಟೋ E32s ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ MyUX ಅನ್ನು ಬಾಕ್ಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಮ್ಯಾಪಿಂಗ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಇದಲ್ಲದೆ 8ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ E32s ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಜೊತೆಗೆ ಈ ಫೋನ್ AI ಫೇಸ್ ಅನ್‌ಲಾಕ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 9,299ರೂ. ಬೆಲೆಯನ್ನು ಹೊಂದಿದೆ. ಇದು ಲಾಂಚ್ ಆಫರ್‌ನಲ್ಲಿ 8,999 ರೂ.ಬೆಲೆಗೆ ಲಭ್ಯವಾಗಲಿದೆ. ಇದು ಜೂನ್ 6 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇನ್ನು ಈ ಫೋನ್ ಸ್ಲೇಟ್ ಗ್ರೇ ಮತ್ತು ಮಿಸ್ಟಿ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








