ಮೊಟೊ E40 ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ನೂತನ ಬೆಲೆ ಎಷ್ಟು ಗೊತ್ತಾ?
ಮೊಟೊರೊಲಾ ಸಂಸ್ಥೆಯು ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿದ್ದು, ಗ್ರಾಹಕರಿಗೆ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಆಯ್ಕೆ ನೀಡಿದೆ. ಆ ಪೈಕಿ ಕಳೆದ ವರ್ಷ ಬಿಡುಗಡೆ ಆಗಿರುವ ಮೊಟೊ E40 ಫೋನ್ ಎಂಟ್ರಿ ಲೆವೆಲ್ ಸೆಗ್ಮೆಂಟ್‌ನ ಸ್ಮಾರ್ಟ್‌ಫೋನ್ ಆಗಿದೆ. ಆದ್ರೆ ಇದೀಗ ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ನಲ್ಲಿ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ತಂದಿದೆ.

ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊ E40 ಸ್ಮಾರ್ಟ್‌ಫೋನ್ ಆಕರ್ಷಕ ಬೆಲೆ ಇಳಿಕೆ ಕಂಡಿದೆ. 9,499ರೂ. ಪ್ರೈಸ್ ಟ್ಯಾಗ್‌ನಲ್ಲಿದ್ದು ಈ ಫೋನ್ ಈಗ ಫ್ಲಿಪ್‌ಕಾರ್ಟ್ ತಾಣದಲ್ಲಿ 8,599ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ. ಅಂದಹಾಗೆ ಈ ಫೋನ್ 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೆ ಮೊಟೊ E40 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಮೊಟೊ E40 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 81.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 270ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಮೊಟೊ E40 ಸ್ಮಾರ್ಟ್‌ಫೋನ್ ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಮೊಟೊ E40 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾಗಳು ಪೋರ್ಟ್ರೇಟ್ ಮೋಡ್, ಪನೋರಮಾ, ಫೇಸ್ ಬ್ಯೂಟಿ, ಎಚ್‌ಡಿಆರ್ ನೈಟ್ ವಿಷನ್, ಮ್ಯಾಕ್ರೋ ವಿಷನ್ ಮತ್ತು ಪ್ರೊ ಮೋಡ್ ಫೀಚರ್ಸ್‌ಗಳನ್ನು ಬೆಂಬಲಿಸುತ್ತವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E40 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g, ಬ್ಲೂಟೂತ್ v5.0, GPS/A-GPS, FM ರೇಡಿಯೋ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ E40 4GB RAM + 64GB ಸ್ಟೋರೇಜ್ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ 8,599ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಕಾರ್ಬನ್ ಗ್ರೇ ಮತ್ತು ಪಿಂಕ್ ಕ್ಲೇ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








