ಮೋಟೋ E6I ಸ್ಮಾರ್ಟ್‌ಫೋನ್ ಲಾಂಚ್! ವಿಶೇಷತೆ ಏನು?
ಜನಪ್ರಿಯ ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆನೇಕ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಮೋಟೋ ಕಂಪೆನಿ ಇದೀಗ ತನ್ನ ಹೊಸ ಮೋಟೋ E6I ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬಜೆಟ್ ಸ್ನೇಹಿ ಬೆಲೆಯಲ್ಲಿ ಲಭ್ಯವಾಗಲಿದ್ದು, ಬ್ರೆಜಿಲ್‌ನಲ್ಲಿ ಬಿಡುಗಡೆಯಾಗಿದೆ. ಇನ್ನು ಈ ಫೋನ್ ಅನ್ನು ಸಿಂಲ್ RAM ಮತ್ತು ಇಂಟರ್ ಸ್ಟೋರೇಜ್ ಮತ್ತು ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಹೌದು, ಮೊಟೊರೊಲಾ ಸಂಸ್ಥೆ ಹೊಸ ಮೋಟೋ E6I ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಕ್ಟಾ-ಕೋರ್ ಟೈಗರ್ SC 9863a SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಇದು 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೋಟೋ E6I ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.1-ಇಂಚಿನ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 80.4% ರಷ್ಟಿದೆ. ಇದಲ್ಲದೆ ಈ ಡಿಸ್‌ಪ್ಲೇ 282 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಟೈಗರ್ SC 9863A SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದೊಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಮೋಟೋ E6I ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೋಟೋ E6I ಸ್ಮಾರ್ಟ್‌ಫೋನ್ 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G, GPS, ಬ್ಲೂಟೂತ್ 4.2, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿವೆ.

ಬೆಲೆ ಮತ್ತು ಲಭ್ಯತೆ
ಇನ್ನು ಮೊಟೊ E6I ಸ್ಮಾರ್ಟ್‌ಫೋನ್ ಏಕೈಕ 2GB RAM + 32GB ಶೇಖರಣಾ ರೂಪಾಂತರಕ್ಕೆ BRL 1,099 (ಸುಮಾರು ರೂ. 14,900). ಇದು ಮೊಟೊರೊಲಾ ಬ್ರೆಜಿಲ್ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಿಂಕ್ ಮತ್ತು ಟೈಟಾನಿಯಂ ಗ್ರೇ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಈಗಿನಂತೆ, ಮೊಟೊರೊಲಾ ಅಂತರರಾಷ್ಟ್ರೀಯ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.


Click it and Unblock the Notifications