ಭಾರತದಲ್ಲಿ ಮೋಟೋ E7 ಪವರ್ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಮೊಟೊರೊಲಾ ಸಂಸ್ಥೆ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ದಿಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇದೀಗ ಮೊಟೊರೊಲಾ ಸಂಸ್ಥೆ ಹೊಸದಾಗಿ ಮೋಟೋ E7 ಪವರ್ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬಿಡುಗಡೆಯ ದಿನಾಂಕ ಇದೀಗ ಬಹಿರಂಗವಾಗಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ E7 ಪವರ್ ಸ್ಮಾರ್ಟ್‌ಫೋನ್ ಬಿಡುಗಡೆಗೆ ವೇದಿಕೆ ಸಿದ್ದ ಪಡಿಸುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಿಡುಗಡೆಯ ದಿನಾಂಕ ಬಹಿರಂಗವಾಗಿದ್ದು, ಇದೇ ಫೆಬ್ರವರಿ 19 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ . ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್ ಅನ್ನು ಹೊಂದಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಮೋಟೋ E7 ಪವರ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 270PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇರಲಿದೆ. ಜೊತೆಗೆ 4GB RAM+ 64GB ಸ್ಟೋರೇಜ್ ಆಯ್ಕೆ ಒಳಗೊಂಡಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಸಹ 5,000mAh ಸಾಮರ್ಥ್ಯದ ಬ್ಯಾಟರಿ ಪವರ್ ಅನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಮೋಟೋ E7 ಪವರ್ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮೂಲಕ ಫೆಬ್ರವರಿ 19 ರಿಂದ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಲಭ್ಯವಿರುವುದು ಖಚಿತವಾಗಿದೆ. ಇದು ಸಿಂಗಲ್ 4GB + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರುತ್ತದೆ. ಆದರೆ ಇದರ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಈ ಫೋನ್ ಕೆಂಪು ಮತ್ತು ನೀಲಿ ಬಣ್ಣಗಳ ಆಯ್ಕೆ ಪಡೆದಿರಲಿವೆ.


Click it and Unblock the Notifications
