ಭಾರತದಲ್ಲಿ ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಬಿಡುಗಡೆ; ಬೆಲೆ ಅಗ್ಗ!
ಮೊಟೊರೊಲಾ ಮೊಬೈಲ್ ಸಂಸ್ಥೆ ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಮೊಟೊ E ಸ್ಮಾರ್ಟ್‌ಫೋನ್ ಸರಣಿಯಲ್ಲಿ ಲಾಂಚ್ ಆಗಿರುವ ಈ ಫೋನ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಡ್ಯುಯಲ್ ರಿಯರ್ ಕ್ಯಾಮೆರಾ ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ ಫೀಚರ್ಸ್‌ಗಳಾಗಿವೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಪ್ಲಿಪ್‌ಕಾರ್ಟ್ ತಾಣದ ಮೂಲಕ ದೇಶಿಯ ಮಾರುಕಟ್ಟೆಗೆ ಬಿಡುಗಡೆಗೆ ಮಾಡಿದೆ. ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್ ಹೊಂದಿರುವ ಈ ಫೋನ್ 4GB RAM + 64GB ಆಂತರಿಕ ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಇದೇ ಫೆ.26ರಂದು ಫಸ್ಟ್ ಸೇಲ್ ಶುರುವಾಗಲಿದೆ. ಹಾಗಾದರೇ ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಮೊಟೊ E7 ಪವರ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 270PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇರಲಿದೆ. ಜೊತೆಗೆ 4GB RAM+ 64GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ
ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E7 ಪವರ್ ಸ್ಮಾರ್ಟ್‌ಫೋನ್ ಸಹ 5,000mAh ಸಾಮರ್ಥ್ಯದ ಬ್ಯಾಟರಿ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 10W ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ E7 ಪವರ್ ಸ್ಮಾರ್ಟ್‌ಫೋನ್ 4GB RAM+ 64GB ವೇರಿಯಂಟ್ ಬೆಲೆಯು ಭಾರತದಲ್ಲಿ 8,299ರೂ. ಆಗಿದೆ. ಇನ್ನು ಇದೇ ಫೆ.26 ರಂದು ಫ್ಲಿಪ್‌ಕಾರ್ಟ್ ಮೂಲಕ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ ಕೆಂಪು ಮತ್ತು ನೀಲಿ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications