Just In
Don't Miss
- News
2 ಪಟ್ಟಣ ಪಂಚಾಯತಿ ಹಾಗೂ ವಿವಿಧ 27 ವಾರ್ಡ್ಗಳ ಚುನಾವಣಾ ದಿನಾಂಕ ಪ್ರಕಟ
- Automobiles
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- Movies
'ತಲೆದಂಡ' ಸಿನಿಮಾಕ್ಕೆ ಅನ್ಯಾಯ: ಮನವಿ ಮಾಡಿದ ಸಂಚಾರಿ ವಿಜಯ್
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Sports
ಸೌತಾಂಪ್ಟನ್ನಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
- Lifestyle
ಹೀಗೆ ಆಯ್ಕೆ ಮಾಡಿದರೆ ನೀವು ಬಯಸಿದಂಥ ಸಂಗಾತಿಯೇ ಸಿಗುವರು
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೋಟೋ E7 ಸ್ಮಾರ್ಟ್ಫೋನ್ ಲಾಂಚ್! ಮ್ಯಾಕ್ಸ್ ವಿಷನ್ ಡಿಸ್ಪ್ಲೇ ವಿಶೇಷ!
ಮೊಟೊರೊಲಾ ಸಂಸ್ಥೆ ತನ್ನ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವಿಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿರುವ ಮೊಟೊರೊಲಾ ಇದೀಗ ತನ್ನ ಹೊಸ ಮೋಟೋ E7 ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಹಿಂದಿನ E ಸರಣಿಯ ಸ್ಮಾರ್ಟ್ಫೋನ್ಗಳಿಗಿಂತ ಬಿನ್ನವಾಗಿದ್ದು, ಕ್ಯಾಮೆರಾ ಮಾಡ್ಯೂಲ್ ದೊಡ್ಡಾದಾಗಿದೆ. ಅಲ್ಲದೆ ಫೋನ್ ಫೀಚರ್ಸ್ಗಳಲ್ಲಿ ಸಾಕಷ್ಟು ಆಪ್ಗ್ರೇಡ್ ಆಗಿದ್ದು, ಟ್ರೆಂಡಿಯರ್ ಲುಕ್ ನೀಡಲು ಹೊಸ ವಿನ್ಯಾಸವನ್ನು ನೀಡಲಾಗಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ E7 ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಬಜೆಟ್ ಶ್ರೇಣಿಯ ಸ್ಮಾರ್ಟ್ಫೋನ್ ಆಗಿದ್ದು, ಇದರಲ್ಲಿ ಮೋಟೋ E7 ಪ್ಲಸ್ ಕೂಡ ಸೇರಿದೆ. ಇನ್ನು ಈ ಸ್ಮಾರ್ಟ್ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಇದರ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ
ಮೋಟೋ E7 ಸ್ಮಾರ್ಟ್ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್ಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು ಮ್ಯಾಕ್ಸ್ ವಿಷನ್ ಡಿಸ್ಪ್ಲೇ ಆಗಿದ್ದು, ಹೆಚ್ಡಿ + ರೆಸಲ್ಯೂಶನ್ ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತದೊಂದಿಗೆ IPS TFT LCD ಸ್ಕ್ರೀನ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM+32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ E7 ಸ್ಮಾರ್ಟ್ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ 36 ಗಂಟೆಗಳ ಬ್ಯಾಕ್ಅಪ್ ಅನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೋಟೋ E7 ಸ್ಮಾರ್ಟ್ಫೋನ್ ಬೆಲೆ ಯುರೋ 110 (ಅಂದಾಜು 9,000 ರೂ) ಆಗಿದ್ದು, ಶೀಘ್ರದಲ್ಲೇ ಇತರ ಮಾರುಕಟ್ಟೆಗಳಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್ಫೋನ್ ಮಿನರಲ್ ಗ್ರೇ, ಆಕ್ವಾ ಬ್ಲೂ ಮತ್ತು ಸ್ಯಾಟಿನ್ ಕೋರಲ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190