ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ !
ಮೊಟೊರೊಲಾ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರಲ್ಲಿ ಒಂದೆನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಇದೀಗ ಹೊಸದಾಗಿ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಫ್ಲ್ಯಾಗ್‌ಶಿಫ್ ಮಾದರಿಯ ಫೋನ್ ಆಗಿದ್ದು, ಹೈ ಎಂಡ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಫೋನ್ 144Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 4,020 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 33W ಪವರ್ ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB + 256 GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಹಾಗಾದರೆ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ HD + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್ ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ HDR 10+ ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್ ಪವರ್ ಎಷ್ಟು
ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಓಎಸ್ ಕಾರ್ಯ ನಿರ್ವಹಿಸುತ್ತದೆ. ಈ ಫೋನ್ ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8 GB + 256 GB ಸ್ಟೋರೇಜ್ ಆಯ್ಕೆಯಲ್ಲಿ ಸಾಮರ್ಥ್ಯದಲ್ಲಿವೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇಲ್ಲ.
ಕ್ಯಾಮೆರಾ ಸೆನ್ಸಾರ್ ವಿಶೇಷ
ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಹಾಗೆಯೇ ಆಕರ್ಷಕ ಫೀಚರ್‌ಗಳನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ
ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 33W ಟರ್ಬೋ ಪವರ್ ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇನ್ನು ಈ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ 8 GB RAM + 256 GB ಸ್ಟೋರೇಜ್ ರೂಪಾಂತರವು EUR 450 (ಭಾರತದಲ್ಲಿ ಅಂದಾಜಿ 36,500ರೂ.) ಆಗಿದೆ.


Click it and Unblock the Notifications