Home
ಸುದ್ದಿಜಾಲ

ಮೊಟೊ ಎಡ್ಜ್‌ 40 ಫೋನ್‌ ಲಾಂಚ್‌ಗೆ ದಿನಾಂಕ ನಿಗದಿ!..ಆಕರ್ಷಕ ಫೀಚರ್ಸ್!

ಮೊಟೊರೊಲಾ ಕಂಪೆನಿ ಇತ್ತೀಚಿಗಷ್ಟೆ ಯುರೋಪ್‌ನಲ್ಲಿ ಬಿಡುಗಡೆ ಮಾಡಿರುವ ಮೊಟೊ ಎಡ್ಜ್‌ 40 ಫೋನ್‌ ಟ್ರೆಂಡಿ ಲುಕ್‌ನಲ್ಲಿ ಗಮನ ಸೆಳೆದಿದೆ. ಇದೀಗ ಮೊಟೊ ಸಂಸ್ಥೆಯು ಈ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಂಡಿದೆ.

ಹೌದು, ಮೊಟೊ ಸಂಸ್ಥೆಯು ತನ್ನ ಹೊಸ ಮೊಟೊ ಎಡ್ಜ್‌ 40 ಮೊಬೈಲ್‌ ಅನ್ನು ಇದೇ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಲೂನಾರ್ ಬ್ಲೂ, ನೆಬ್ಯುಲಾ ಗ್ರೀನ್ ಮತ್ತು ಎಕ್ಲಿಪ್ಸ್ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಮೊಟೊ ಎಡ್ಜ್‌ 40 ಫೋನ್‌ ಲಾಂಚ್‌ಗೆ ದಿನಾಂಕ ನಿಗದಿ!..ಆಕರ್ಷಕ ಫೀಚರ್ಸ್!

ಮೊಟೊ ಎಡ್ಜ್‌ 40 ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ ಎಡ್ಜ್‌ 40 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಫೋಲ್ಡ್‌ ಸ್ಕ್ರೀನ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್, 1,200 nits ಪೀಕ್ ಬ್ರೈಟ್‌ನೆಸ್ ಮತ್ತು HDR10+ ಪ್ರಮಾಣೀಕರಣವನ್ನು ಹೊಂದಿದೆ.

ಮೊಟೊರೊಲಾ ಎಡ್ಜ್‌ 40 ಪ್ರೊಸೆಸರ್‌ ಯಾವುದು : ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಮೊಟೊ ಎಡ್ಜ್‌ 40 ಫೋನ್‌ ಲಾಂಚ್‌ಗೆ ದಿನಾಂಕ ನಿಗದಿ!..ಆಕರ್ಷಕ ಫೀಚರ್ಸ್!

ಮೊಟೊರೊಲಾ ಎಡ್ಜ್‌ 40 ಕ್ಯಾಮೆರಾ ಸೆಟ್‌ಅಪ್‌ : ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು OIS ಬೆಂಬಲವನ್ನು ಪಡೆದಿದೆ.

ಇನ್ನು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 40 ಬ್ಯಾಟರಿ ಬ್ಯಾಕ್‌ಅಪ್‌ : ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಯನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 40 ಲಭ್ಯತೆ : ಈ ಫೋನ್ ಇದೇ ತಿಂಗಳು ಭಾರತದಲ್ಲಿ ಲಾಂಚ್ ಆಗಲಿದೆ. ಇನ್ನು ಇದು ಎಕ್ಲಿಪ್ಸ್ ಬ್ಲ್ಯಾಕ್, ಲೂನಾರ್ ಬ್ಲೂ ಮತ್ತು ನೆಬ್ಯುಲಾ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Moto Edge 40 India Launch This Month: Check Full Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+