Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಹವಾ ಕ್ರಿಯೆಟ್‌ ಮಾಡಿದೆ ಈ ಫೋನ್‌! ಅಂತಹದ್ದೇನಿದೆ?

ಮೊಟೊರೊಲಾ ಕಂಪೆನಿಯ ಫೋನ್‌ಗಳಿಗೆ ಭಾರಿ ನಿರೀಕ್ಷೆಯಿದೆ. ಅದರಂತೆ ಇದೀಗ ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಈ ಸ್ಮಾರ್ಟ್‌ಫೋನ್‌ನ ಲುಕ್‌ ಹಾಗೂ ಡಿಸೈನ್‌. ಅದಕ್ಕೆ ತಕ್ಕಂತೆ ಇದೀಗ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊ ಎಡ್ಜ್ 40 ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1100 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಹವಾ ಕ್ರಿಯೆಟ್‌ ಮಾಡಿದೆ ಈ ಫೋನ್‌! ಅಂತಹದ್ದೇನಿದೆ?

ಮೊಟೊ ಎಡ್ಜ್‌ 40 ಫೀಚರ್ಸ್‌ ನಿರೀಕ್ಷೆ ಏನು?

ಮೊಟೊ ಎಡ್ಜ್‌ 40 ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿರಲಿದೆ ಎನ್ನಲಾಗಿದ್ದು, 90.8% ಸ್ಕ್ರೀನ್-ಟು-ಬಾಡಿ ಅನುಪಾತದೊಂದಿಗೆ ಬರಲಿದೆ.

ಮೊಟೊ ಎಡ್ಜ್‌ 40 ಪ್ರೊಸೆಸರ್‌ ಯಾವುದು?

ಮೊಟೊ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1100 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಹವಾ ಕ್ರಿಯೆಟ್‌ ಮಾಡಿದೆ ಈ ಫೋನ್‌! ಅಂತಹದ್ದೇನಿದೆ?

ಮೊಟೊ ಎಡ್ಜ್‌ 40 ಕ್ಯಾಮೆರಾ ಸೆಟ್‌ಅಪ್‌

ಮೊಟೊ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿರಬಹುದು ಎಂಬ ನಿರೀಕ್ಷೆಯಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ಮೊಟೊ ಎಡ್ಜ್‌ 40 ಬ್ಯಾಟರಿ ಬ್ಯಾಕ್‌ಅಪ್‌ ಏನಿರಬಹುದು

ಮೊಟೊ ಎಡ್ಜ್‌ 40 ಸ್ಮಾರ್ಟ್‌ಫೋನ್‌ 68W ವೈರ್ಡ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಹಾಗೂ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ.

ಬಿಡುಗಡೆಗೂ ಮುನ್ನವೇ ಹವಾ ಕ್ರಿಯೆಟ್‌ ಮಾಡಿದೆ ಈ ಫೋನ್‌! ಅಂತಹದ್ದೇನಿದೆ?

ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಮೊಟೊ G13 ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಹೆಚ್‌ ಡಿ+ ರೆಸಲ್ಯೂಶನ್‌ ಡಿಸ್‌ಪ್ಲೇ ಹೊಂದಿದ್ದು, ಇದು 576Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ನಲ್ಲಿ ರನ್ ಆಗುತ್ತದೆ. ಇದರೊಂದಿಗೆ 4GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ನೀಡಲಾಗಿದ್ದು, ಈ ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಆಯ್ಕೆಯನ್ನೂ ನೀಡಲಾಗಿದೆ. ಇನ್ನುಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್‌ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಅನ್ನು ಪಡೆದಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಪಡೆದುಕೊಂಡಿದೆ.

Best Mobiles in India

English summary
Moto Edge 40 launch in the mid-range segment in multiple markets soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+