ಮೊಟೊರೊಲಾ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಭಾರೀ ಬೆಲೆ ಇಳಿಕೆ!
ಮೊಟೊರೊಲಾ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಈಗ ಭರ್ಜರಿ ಸಿಹಿಸುದ್ದಿ ಇದೆ. ಅದು ಏನೆಂದರೆ, ಮೊಟೊ ಸಂಸ್ಥೆಯ ಇತ್ತೀಚಿನ ಜನಪ್ರಿಯ ಫೋನ್‌ಗಳಲ್ಲಿ ಒಂದಾದ ಮೊಟೊ ಎಡ್ಜ್ 40 ಫೋನ್ ಬೆಲೆಯಲ್ಲಿ ಈಗ ಭಾರೀ ಬೆಲೆ ಇಳಿಕೆ ಆಗಿದೆ.
ಹೌದು, ಮೊಟೊರೊಲಾ ಕಂಪನಿಯ ಮೊಟೊ ಎಡ್ಜ್ 40 ಮೊಬೈಲ್ ಬೆಲೆಯಲ್ಲಿ ಸುಮಾರು 3,000ರೂ. ಗಳ ಕಡಿತ ಆಗಿದೆ. ಬೆಲೆ ಇಳಿಕೆಯ ಬಳಿಕ ಈ ಫೋನ್ ಇದೀಗ 26,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಕಾಣಿಸಿಕೊಂಡಿದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಶೇ. 10% ರಷ್ಟು ಇನ್‌ಸ್ಟಂಟ್ ಡಿಸ್ಕೌಂಟ್ ಕೊಡುಗೆಯು ಸಹ ದೊರೆಯುತ್ತದೆ.

ಇನ್ನು ಮೊಟೊರೊಲಾ ಎಡ್ಜ್ 40 ಫೋನ್ ವೈವಾ ಮೆಜೆಂಟಾ, ಬ್ಲ್ಯಾಕ್, ಗ್ರೀನ್ ಹಾಗೂ ಬ್ಲೂ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಈ ಮೊಬೈಲ್ 4,400 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಹಾಗಾದರೆ ಮೊಟೊರೊಲಾ ಎಡ್ಜ್ 40 ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್ 40 - ಫೀಚರ್ಸ್
ಮೊಟೊರೊಲಾ ಸಂಸ್ಥೆಯ ಈ ಮೊಬೈಲ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಫೋಲ್ಡ್ ಸ್ಕ್ರೀನ್ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್, 1,200 nits ಪೀಕ್ ಬ್ರೈಟ್‌ನೆಸ್ ಮತ್ತು HDR 10+ ಪ್ರಮಾಣೀಕರಣವನ್ನು ಕೂಡಾ ಪಡೆದಿದೆ.
ಮೊಟೊ ಸಂಸ್ಥೆಯ ಎಡ್ಜ್ 40 ಮೊಬೈಲ್ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಪವರ್ ಅನ್ನು ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಸಹ ಒಳಗೊಂಡಿದೆ. ತನ್ನ ವರ್ಗದಲ್ಲೇ ಅತ್ಯುತ್ತಮ ಪ್ರೊಸೆಸರ್ ಇದಾಗಿದೆ.
ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು OIS ಸಪೋರ್ಟ್ ಅನ್ನು ಪಡೆದಿದೆ. ಇನ್ನು ಸೆಕೆಂಡರಿ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಮೊಟೊ ಕಂಪನಿಯ ಈ ಮೊಬೈಲ್ 4,400 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದು 68 W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15 W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಯನ್ನು ಒಳಗೊಂಡಿದೆ.
ಮೊಟೊರೊಲಾ ಎಡ್ಜ್ 40 ಮೊಬೈಲ್ 8GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ವೈವಾ ಮೆಜೆಂಟಾ, ಬ್ಲ್ಯಾಕ್, ಗ್ರೀನ್ ಹಾಗೂ ಬ್ಲೂ ಕಲರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








